ಸುಳ್ಯ: ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಾದಕ ವಸ್ತು ವಿರೋಧಿ ಜಾಗೃತಿ ಕಾರ್ಯಕ್ರಮ ನಡೆಯಿತು. ಸುಳ್ಯ ಪೋಲೀಸ್ ಉಪನಿರೀಕ್ಷಕ ಶ್ರೀ ಸಂತೋಷ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾದಕ ವಸ್ತುಗಳ ಬಗ್ಗೆ ಅರಿವು ಮೂಡಿಸುವ ಉಪನ್ಯಾಸ ನೀಡಿದರು. ನಿಷೇಧಿತ ಮಾದಕ ವಸ್ತುಗಳ ಪರಿಣಾಮಗಳು ಕಾನೂನು ನಿಯಮಗಳು ಹಾಗೂ ವಿದ್ಯಾರ್ಥಿಗಳಿಗೆ ಇದು ಹೇಗೆ ಹಾನಿಕಾರಕ ಎಂಬುದರ ಬಗ್ಗೆ
ಮಾಹಿತಿ ನೀಡಿದರು. ಮಾದಕ ವಸ್ತುಗಳ ವಿರುದ್ಧ ವಿದ್ಯಾರ್ಥಿಗಳು ಸೇರಿ ಎಲ್ಲರೂ ಸೆಟೆದು ನಿಂತು ಹೋರಾಡಬೇಕು ಎಂದು ಹೇಳಿದರು.
ಎಒಎಲ್ಇ ಕಮಿಟಿ ಬಿ ಕಾರ್ಯದರ್ಶಿ ಡಾ. ಜ್ಯೋತಿ ಆರ್. ಪ್ರಸಾದ್ ಮಾತನಾಡಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಎಲ್ಲರಿಗೂ ಸರಿಯಾಗಿ ಜಾಗೃತಿ ನೀಡುವುದರ ಅಗತ್ಯತೆಯನ್ನು ವಿವರಿಸಿದರು.

ಎ.ಒ.ಎಲ್.ಇ, ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರಾದ
ಡಾ. ಉಜ್ವಲ್ ಯು.ಜೆ. ಮಾತನಾಡಿ ವಿದ್ಯಾರ್ಥಿಗಳು ಸದ್ಗುಣಗಳನ್ನು ಅಭ್ಯಾಸ ಮಾಡುವ ಮೂಲಕ ಮಾದಕ ವಸ್ತುಗಳಿಂದ ದೂರವಿರಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಶ್ರೀ ಸಂತೋಷ್ ಉಪನಿರೀಕ್ಷಕರು, ಸುಳ್ಯ ಅವರನ್ನು ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು. ಪ್ರಾಂಶುಪಾಲರಾದ ಡಾ. ಸುರೇಶ ವಿ ಮಾತನಾಡಿದರು.

ಈ ಕಾರ್ಯಕ್ರಮವನ್ನು ಕಾಲೇಜಿನ ಎನ್.ಎಸ್.ಎಸ್. ಮತ್ತು ಯೂತ್ ರೆಡ್ ಕ್ರಾಸ್ ವತಿಯಿಂದ ಹಮ್ಮಿಕೊಳ್ಳಲಾಯಿತು.
ಕಾಲೇಜಿನ ಅಕಾಡೆಮಿಕ್ ಡೀನ್ ಡಾ.ಪ್ರಜ್ಞಾ ಎಂ.ಆರ್. ಸ್ವಾಗತಿಸಿದರು.
ಪ್ರೊ. ಸತ್ಯಜಿತ್ ಎಂ, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ವಂದಿಸಿದರು.

ಈ ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲ ಡಾ. ಶ್ರೀಧರ್ ಕೆ. ಎಲ್ಲಾ ವಿಭಾಗಗಳ ಮುಖ್ಯಸ್ಥರುಗಳು, ಎನ್.ಎಸ್.ಎಸ್. ಸಂಯೋಜಕರುಗಳಾದ ಪ್ರೊ. ನಸೀಮಾ, ಪ್ರೊ. ಅಶ್ವಿತಾ,
ಪ್ರೊ. ಲಕ್ಷ್ಮೀನಾರಾಯಣ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ಮನಸ್ವಿ ಕೆ. ಮತ್ತು ಖುಷಿ ಕೆ.ಟಿ. ಕಾರ್ಯಕ್ರಮ ನಿರೂಪಿಸಿದರು.