ಮಂಗಳೂರು:ಕರ್ನಾಟಕ ಹಾಗೂ ಕೇರಳ ರಾಜ್ಯದ ಕೃಷಿಕರ ಅಂತಾರಾಜ್ಯ ಸಂಸ್ಥೆ ಕ್ಯಾಂಪ್ಕೊದ ನೂತನ ಅಧ್ಯಕ್ಷರಾಗಿ ಎಸ್. ಆರ್.ಸತೀಶ್ಚಂದ್ರ ಹಾಗೂ ಉಪಾಧ್ಯಕ್ಷರಾಗಿ ಪದ್ಮರಾಜ ಪಟ್ಟಾಜೆ ಅವರು ಆಯ್ಕೆಯಾಗಿದ್ದಾರೆ. ಡಿ.2ರಂದು ನಡೆದ ನಿರ್ದೇಶಕರ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು.ಸತೀಶ್ಚಂದ್ರ ಅವರು

ಪದ್ಮರಾಜ ಪಟ್ಟಾಜೆ ಹಾಗೂ ಎಸ್. ಆರ್.ಸತೀಶ್ಚಂದ್ರ
ಕ್ಯಾಂಪ್ಕೊ ಅಧ್ಯಕ್ಷರಾಗಿ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ. ಎರಡನೇ ನಿರ್ದೆಶಕರಾದ ಪದ್ಮರಾಜ ಪಟ್ಟಾಜೆಯವರು ಪ್ರಥಮ ಬಾರಿಗೆ ಉಪಾಧ್ಯಕ್ಷರಾಗಿದ್ದಾರೆ.
ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು.19 ನಿರ್ದೇಶಕರ ಪೈಕಿ ಕೇರಳದ 9 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದರೆ, ಕರ್ನಾಟಕದ 10 ನಿರ್ದೇಶಕರಲ್ಲಿ 4 ಮಂದಿ ಅವಿರೋಧವಾಗಿ ಮತ್ತು 6 ಮಂದಿ ಚುನಾವಣೆಯ ಮೂಲಕ ಆಯ್ಕೆಯಾಗಿದ್ದರು.





