ಅಡ್ಕಾರು:ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ವಿಜಯ ಗ್ರಾಮಾಭಿವೃದ್ಧಿ ಸಮಿತಿ ಜಾಲ್ಸೂರು, ಶ್ರೀ ಸುಬ್ರಹ್ಮಣ್ಯ ಸಂಜೀವಿನಿ ಒಕ್ಕೂಟ ಜಾಲ್ಸೂರು ಇವುಗಳ ಸಹಯೋಗದೊಂದಿಗೆ ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಕ್ಯಾನ್ಸರ್ ಬಗ್ಗೆ ಜಾಗೃತಿ ಕಾರ್ಯಕ್ರಮ ಅಡ್ಕಾರಿನ ಶ್ರೀ ಸುಬ್ರಹ್ಮಣ್ಯ ಸಂಜೀವಿನಿ ಒಕ್ಕೂಟದ ಸಭಾಭವನ ಫೆ. 5 ರಂದು ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು
ವಿಜಯ ಗ್ರಾಮೀಣಾಬಿವೃದ್ಧಿ ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜ್ಯೋತಿರಾಜ್ ನೆರವೇರಿಸಿದರು.ವಿಜಯ ಗ್ರಾಮಾಭಿವೃದ್ಧಿ ಸಮಿತಿಯ ಅಧ್ಯಕ್ಷ ಯಶ್ವಿತ್ ಕಾಳಮ್ಮನೆ ಅಧ್ಯಕ್ಷತೆ ವಹಿಸಿದ್ದರು.
ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟ್ ಸುಳ್ಯ ಶಾಖೆಯ ಹೇಮಂತ್ ನಾರ್ಕೋಡು ಮಾಹಿತಿ ನೀಡಿದರು.ಜಾಲ್ಸೂರು ಗ್ರಾ.ಪಂ. ಅಧ್ಯಕ್ಷೆ
ಸಾವಿತ್ರಿ ಅಡ್ಕಾರು, ಉಪಾಧ್ಯಕ್ಷೆ ತಿರುಮಲೇಶ್ವರಿ ಅರ್ಭಡ್ಕ, ಸಂಜೀವಿನಿ ಒಕ್ಕೂಟಗಳ ಮೇಲ್ವಿಚಾರಕ ಮಹೇಶ್, ಶ್ರೀ ಸುಬ್ರಹ್ಮಣ್ಯ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಕುಸುಮಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಾರಿಜ ಟೀಚರ್ ಸ್ವಾಗತಿಸಿ, ವೇದಾ ಶೆಟ್ಟಿ ವಂದಿಸಿದರು. ಗಣೇಶ್ ರೈ ಕುಕ್ಕoದೂರು ಕಾರ್ಯಕ್ರಮ ನಿರೂಪಿಸಿದರು.







