ಸುಳ್ಯ:ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರವಾಸ ಕೈಗೊಂಡು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಬೆಳಿಗ್ಗೆ ಕೊಡಿಯಾಲದಲ್ಲಿ ಇಂಟರ್ ಲಾಕ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಬೆಳ್ಳಾರೆ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಗೌರಿಪುರಂನಲ್ಲಿ ಕಾರ್ಯಕರ್ತರ ಭೇಟಿ ಮತ್ತು ಅಹವಾಲು ಸ್ವೀಕರಿಸಿದರು. ನಂತರ
ಆಲೆಟ್ಟಿಯಲ್ಲಿ ಕಾರ್ಯಕರ್ತರನ್ನು ಭೇಟಿ ಮಾಡಿ ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಅಹವಾಲು ಸ್ವೀಕರಿಸಿ ಕಾರ್ಯಕರ್ತರ ಸಭೆ ನಡೆಸಿದರು. ನಂತರ ಗುತ್ತಿಗಾರು ಮಹಾಶಕ್ತಿ ಕೇಂದ್ರ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಕೇಂದ್ರ ಸರ್ಕಾರ ಯೋಜನೆ ಬಗ್ಗೆ ಮಾಹಿತಿ ನೀಡಿದರು. ಕಲ್ಲುಗುಂಡಿ- ಸಂಪಾಜೆ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಅಹವಾಲು ಸ್ವೀಕಾರ ಮಾಡಿದರು.

ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಸಚಿವ ಎಸ್.ಅಂಗಾರ,ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ರವೀಂದ್ರ ಶೆಟ್ಟಿ ಉಳಿದೊಟ್ಟು, ರಾಕೇಶ್ ರೈ ಕೆಡೆಂಜಿ, ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವಾರ್, ಕಾರ್ಯದರ್ಶಿ ವಿನಯ ಮುಳುಗಾಡು,ಪ್ರಮುಖರಾದ ಹರೀಶ್ ಕಂಜಿಪಿಲಿ,ಎ.ವಿ ತೀರ್ಥರಾಮ, ವೆಂಕಟ್ ದಂಬೆಕೋಡಿ, ವಿನಯ ಕುಮಾರ ಕಂದಡ್ಕ
ಆರ್.ಕೆ ಭಟ್. ಕುರುಂಬುಡೇಲು, ಎ.ಟಿ.ಕುಸುಮಾಧರ, ಶಿವಾನಂದ ಕುಕ್ಕುಂಬಳ ಮುಂತಾದವರು ಉಪಸ್ಥಿತರಿದ್ದರು.














