ಸುಳ್ಯ: ಎರಡು ಕಾರುಗಳ ಮಧ್ಯೆ ಪರಸ್ಪರ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ ಘಟನೆ ಸುಳ್ಯ ತಾಲೂಕಿನ ಕನಕಮಜಲು ಗ್ರಾಮದ ಆನೆಗುಂಡಿಯಲ್ಲಿ ಸಂಭವಿಸಿದೆ. ಕಾರುಗಳು ಜಖಂಗೊಂಡಿದೆ, ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಗಾಯಾಳುಗಳು ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಪುತ್ತೂರಿನಿಂದ ಕೇರಳದ ಬಂದಡ್ಕ ಕಡೆ ಬರುತ್ತಿದ್ದ ಕಾರು ಮತ್ತು ಸುಳ್ಯ ಕಡೆಯಿಂದ ತೆರಳುತ್ತಿದ್ದ ಕಾರು ಮಧ್ಯೆ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post