ಕಾರ್ಕಳ:ಮಾಜಿ ಸಚಿವ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರು ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಕಾರ್ಕಳದ ಸಾಣೂರು ಶ್ರೀ ರಾಮಮಂದಿರ ಬಳಿ ಡಿವೈಡರ್ ಕ್ರಾಸ್ನಲ್ಲಿ ಭಾನುವಾರ ನಡೆದಿದೆ.ರಮಾನಾಥ ರೈ ಅವರು ಅಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿದ್ದ ಅವರ ಆಪ್ತ ಸಹಾಯಕರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಕಾರ್ಕಳ-ಮೂಡುಬಿದಿರೆ ಹೆದ್ದಾರಿಯಲ್ಲಿ ಕಾರು ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳ ಮುಂಭಾಗ ಜಖಂಗೊಂಡಿದೆ.
ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
previous post








