ಸಂಪಾಜೆಃ ಕೊಡಗು ಸಂಪಾಜೆಯ ಬಳಿ ಭೀಕರ ಕಾರು ಅಪಘಾತ ಸಂಭವಿಸಿದೆ. ಇಂದು ಬೆಳಗ್ಗಿನ ಜಾವ ಮೂರು ಗಂಟೆಗೆ ದುರ್ಘಟನೆ ಸಂಭವಿಸಿದೆ.ಕಾರಿನಲ್ಲಿ ಮಂಡ್ಯ ಮೂಲದ ನಾಲ್ವರು ಫೋಟೋ ಗ್ರಾಫರ್ಸ್ ಹೊನ್ನಾವರದಲ್ಲಿ ತಮ್ಮ ಕೆಲಸ ಮುಗಿಸಿ ವಾಪಸ್ ಮಂಡ್ಯಕ್ಕೆ ಹೊರಟಿದ್ದರು. ಸಂಪಾಜೆ ಗೇಟಿನ ಬಳಿ ನಿಯಂತ್ರಣ ತಪ್ಪಿದ
ಕಾರು ರಸ್ತೆಯ ರಕ್ಷಣಾ ಗೋಡೆಗೆ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಕಾರು ಛಿದ್ರ ವಾಗಿದೆ. ರಸ್ತೆಯ ಬದಿಯ ಕಬ್ಬಿಣದ ತಡೆಗೋಡೆ ಕಾರಿನೊಳಕ್ಕೆ ನುಗ್ಗಿದೆ. ಅಪಘಾತದ ತೀವ್ರತೆಗೆ ಇಬ್ಬರಿಗೆ ಗಂಭೀರ ಗಾಯವಾಗಿದ್ದು ಓರ್ವನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ತಿಳಿದು ಬಂದಿದೆ. ಉಳಿದಿಬ್ಬರು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.