ಸಂಪಾಜೆ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಬ್ಬಿನ ತೋಟಕ್ಕೆ ನುಗ್ಗಿದ ಘಟನೆ ಸಂಪಾಜೆಯ ಚೌಕಿ ಬಳಿ ಇಂದು ಬೆಳಗ್ಗೆ ಸಂಭವಿಸಿದೆ. ಮಡಿಕೇರಿ ಕಡೆಗೆ ಹೋಗುತ್ತಿದ್ದ ಆಲ್ಟೋ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಬ್ಬಿನ ತೋಟಕ್ಕೆ ನುಗ್ಗಿತ್ತು. ಕಾರಿನಲ್ಲಿ ದಂಪತಿ ಹಾಗೂ ಇಬ್ಬರು ಮಕ್ಕಳು ಪ್ರಯಾಣಿಸುತ್ತಿದ್ದರು.ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.