ಸುಳ್ಯ; ಸಿಬಿಎಸ್ಇ 10ನೇ ತರಗತಿ ಫಲಿತಾಂಶ ಪ್ರಕಟಗೊಂಡಿದೆ. ಸುಳ್ಯ ಕೆವಿಜಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ಶೇ.100 ಫಲಿತಾಂಶ ದಾಖಲಿಸಿದೆ. 21 ವಿದ್ಯಾರ್ಥಿಗಳು, 22 ವಿದ್ಯಾರ್ಥಿನಿಯರು ಸೇರಿ ಪರೀಕ್ಷೆಗೆ ಹಾಜರಾದ 43 ವಿದ್ಯಾರ್ಥಿಗಳಲ್ಲಿ ಎಲ್ಲರೂ ಉತ್ತೀರ್ಣರಾಗಿ ಶೇ.100 ಫಲಿತಾಂಶ ದಾಖಲಾಗಿದೆ. 32 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ನಲ್ಲಿ 7 ಮಂದಿ ಪ್ರಥಮ ಶ್ರೇಣಿಯಲ್ಲಿ ಹಾಗೂ 4 ಮಂದಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾದರು. ಅಂಶಿ.ಡಿ. ಶೇ.96.7 ಅಂಕ ಪಡೆದು ಸ್ಕೂಲ್ನಲ್ಲಿ ಅತೀ ಹೆಚ್ಚು ಅಂಕ ಪಡೆದಿದ್ದಾರೆ.