ನವದೆಹಲಿ: ಕೇಂದ್ರ ಸಚಿವ ಎಲ್.ಮುರುಗನ್ ಅವರು ಮಂಗಳವಾರ ರಾಜೀನಾಮೆ ನೀಡಿದ್ದಾರೆ.ಕೇಂದ್ರ ಮಾಹಿತಿ ಮತ್ತು ಪ್ರಸಾರ ಹಾಗೂ ಸಂಸದೀಯ ವ್ಯವಹಾರಗಳ ಸಚಿವಾಲಯದ ರಾಜ್ಯ ಸಚಿವರಾಗಿದ್ದ ಅವರು, ತಮಿಳುನಾಡಿನಲ್ಲಿ
ಬಿಜೆಪಿಯನ್ನು ಬಲಪಡಿಸಲು ಈ ನಿರ್ಧಾರ ಕೈಗೊಂಡಿರುವುದಾಗಿ ಹೇಳಿದ್ದಾರೆ. ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಮುರುಗನ್, ‘ನಿಮ್ಮ ನಾಯಕತ್ವದಲ್ಲಿ ಭಾರತ ಮಾತೆ ಮತ್ತು ತಮಿಳುನಾಡಿನ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿದ್ದು ನನ್ನ ಜೀವನದ ದೊಡ್ಡ ಗೌರವ. ತಮಿಳುನಾಡಿನಲ್ಲಿ ಬಿಜೆಪಿ ಬಲಪಡಿಸಲು ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳಬೇಕಿದೆ. ಹೀಗಾಗಿ ನನ್ನ ರಾಜ್ಯಸಭೆ ಸ್ಥಾನ ಬಿಟ್ಟುಕೊಡಲೂ ಅನುಮತಿ ನೀಡಿ’ ಎಂದು ಮನವಿ ಮಾಡಿದ್ದಾರೆ.










