ಮಂಗಳೂರು:ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾದ ಶೋಭಾ ಕರಂದ್ಲಾಜೆ ಅವರು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.
ವಿವರ ಇಂತಿದೆ: ಅವರು ಸೆ.02ರ ಶನಿವಾರ ಬೆಳಿಗ್ಗೆ 8.30ಕ್ಕೆ ಮಂಗಳೂರಿನಿಂದ ಕಾಸರಗೋಡಿಗೆ ತೆರಳುವರು. ನಂತರ ಬೆಳಿಗ್ಗೆ 9.45ಕ್ಕೆ ಕಾಸರಗೋಡಿನ
ಸಿಪಿಸಿಆರ್ಐನಲ್ಲಿ ವರ್ಡ್ ಕೊಕೊನೆಟ್ ದಿನಾಚರಣೆಯಲ್ಲಿ ಭಾಗವಹಿಸುವರು. ಅಲ್ಲಿಂದ 1.45ಕ್ಕೆ ಮಂಗಳೂರಿಗೆ ಆಗಮಿಸಿ ವಾಸ್ತವ್ಯ ಹೂಡುವರು ಎಂದು ಸಚಿವರ ಆಪ್ತ ಸಹಾಯಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಯ ರಾಜ್ಯ ಸಚಿವರಾದ ಡಾ. ಭಾರತಿ ಪ್ರವೀಣ್ ಪವಾರ್ ಅವರು ಇದೇ ಸೆ.4ರ ಸೋಮವಾರ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.
ವಿವರ ಇಂತಿದೆ:
ಅವರು ಸೆ.04ರ ಸೋಮವಾರ ಬೆಳಿಗ್ಗೆ 9ಗಂಟೆಗೆ ಮಂಗಳೂರಿನಿಂದ ಪುತ್ತೂರಿಗೆ ಆಗಮಿಸಿ, ಬೆಳಿಗ್ಗೆ 10.15ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಸಂಜೆ 5.25ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಮುಂಬೈ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.