ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2024ರ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ (CET) ಫಲಿತಾಂಶವನ್ನು ಶನಿವಾರ ಪ್ರಕಟಿಸಿದೆ. ಹರ್ಷಾ ಕಾರ್ತಿಕೇಯ ಮೊದಲ ರ್ಯಾಂಕ್ ಪಡೆದುಕೊಂಡಿದ್ದಾರೆ. ಫಲಿತಾಂಶವು ಪ್ರಾಧಿಕಾರದ ಅಧಿಕೃತ ವೆಬ್ಸೈಟ್ http://kea.kar.nic.inನಲ್ಲಿ ಫಲಿತಾಂಶವನ್ನು ನೋಡಬಹುದು. ಅಭ್ಯರ್ಥಿಗಳು ವಿಷಯವಾರು ಅಂಕಗಳ ವಿವರಗಳನ್ನು
ಡೌನ್ಲೋಡ್ ಮಾಡಿಕೊಳ್ಳಬಹುದು ಎಂದು ತಿಳಿಸಿದೆ.ಏಪ್ರಿಲ್ನಲ್ಲಿ ಸಿಇಟಿ ಪರೀಕ್ಷೆ ನಡೆದಿದ್ದು, 3,10,314 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಈ ಕುರಿತಾಗಿ ಟ್ವೀಟ್ ಮಾಡಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, 2024ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (CET-2024)ಯ ಫಲಿತಾಂಶವನ್ನು ಪ್ರಕಟಿಸಿದೆ.
ಫಲಿತಾಂಶವು ಪ್ರಾಧಿಕಾರದ ವೆಬ್ಸೈಟ್ನಲ್ಲಿ ಲಭ್ಯವಿದ್ದು, ಅಭ್ಯರ್ಥಿಗಳು ವಿಷಯವಾರು ಅಂಕಗಳ ವಿವರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು ಎಂದು ತಿಳಿಸಿದೆ.ಎಂಜಿನಿಯರಿಂಗ್ ಸೇರಿದಂತೆ ನಾನಾ ವೃತ್ತಿಪರ ಕೋರ್ಸುಗಳಿಗೆ ಏ.18 ಮತ್ತು 19ರಂದು ಸಿಇಟಿ ಪರೀಕ್ಷೆಯನ್ನು ನಡೆಸಲಾಗಿತ್ತು.