ಬೆಂಗಳೂರು:ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಪದವಿ ಕೋರ್ಸ್ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ್ದ 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶ ಶನಿವಾರ ಪ್ರಕಟವಾಗಿದೆ.ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಫಲಿತಾಂಶವನ್ನು ಪ್ರಕಟಿಸಿದ್ದಾರೆ.
ರಾಜ್ಯದ 745 ಪರೀಕ್ಷಾ ಕೇಂದ್ರಗಳಲ್ಲಿ ಏಪ್ರಿಲ್ 23 ಮತ್ತು 24ರಂದು ಸಿಇಟಿ ನಡೆಸಲಾಗಿತ್ತು. 23ರಂದು ಭೌತ ವಿಜ್ಞಾನ ಮತ್ತು ರಸಾಯನ ವಿಜ್ಞಾನ ಹಾಗೂ 24ರಂದು ಗಣಿತ ಮತ್ತು ಜೀವ ವಿಜ್ಞಾನ ವಿಷಯಗಳ ಪರೀಕ್ಷೆಗಳು ನಡೆದಿದ್ದವು.
ಹೊರನಾಡು ಮತ್ತು ಗಡಿನಾಡು ಕನ್ನಡಿಗರಿಗೆ ಏ.22ರಂದು ಕನ್ನಡ ಭಾಷಾ ಪರೀಕ್ಷೆ ಬೆಂಗಳೂರು, ಮಂಗಳೂರು, ವಿಜಯಪುರ ಮತ್ತು ಬೆಳಗಾವಿ ನಗರಗಳ ಒಟ್ಟು ಐದು ಕೇಂದ್ರಗಳಲ್ಲಿ ಆಯೋಜಿಸಲಾಗಿತ್ತು. 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ಈ ಕೆಳಗಿನ ಲಿಂಕ್ಗಳನ್ನು ಕ್ಲಿಕ್ಕಿಸಿ ಫಲಿತಾಂಶ ವೀಕ್ಷಿಸಬಹುದು.
https://keaonline.karnataka.gov.in/ugcet_2026_results/
https://cetonline.karnataka.gov.in/kea/







