ಸುಳ್ಯ: ಶ್ರೀ ಶಾರದಾಂಬಾ ಸಮೂಹ ಸಮಿತಿಗಳ ಆಶ್ರಯದಲ್ಲಿ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದ ಶ್ರೀ ಶಾರದಾಂಬ ಕಲಾವೇದಿಕೆಯಲ್ಲಿ ಶನಿವಾರ ಸಂಜೆ ಶ್ರೀ ಚಂಡಿಕಾ ಮಹಾಯಾಗ ನಡೆಯಿತು.ಸುಳ್ಯ ಹಳೆಗೇಟು ವಿದ್ಯಾನಗರದ ಶ್ರೀ ಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಸಹಕಾರದಲ್ಲಿಲೋಕ ಕಲ್ಯಾಣಾರ್ಥವಾಗಿ

ಸಾಮೂಹಿಕ ಶ್ರೀ ಮಹಾಗಣಪತಿ ಹವನ ಸಹಿತ ಶ್ರೀ ಚಂಡಿಕಾ ಮಹಾಯಾಗ ನೆರವೇರಿತು. ಪ್ರತಿಷ್ಠಾನದ ಅಧ್ಯಕ್ಷ ಪುರೋಹಿತ ನಾಗರಾಜ ಭಟ್ ನೇತೃತ್ವದಲ್ಲಿ ಸಾಮೂಹಿಕ ಪ್ರಾರ್ಥನೆ ದೀಪಾರಾಧನೆ,ಸ್ವಸ್ತಿ ಪುಣ್ಯಾಹ ಅಗ್ನಿ ಪ್ರತಿಷ್ಠೆ ನಡೆದು ಮಹಾ ಚಂಡಿಕಾಯಾಗ ನೆರವೇರಿತು. ಈ ಸಂದರ್ಭದಲ್ಲಿ ಮಾತೆಯರಿಂದ ಸಾಮೂಹಿಕ ಲಲಿತ ಸಹಸ್ರನಾಮ ಪಾರಾಯಣ ನಡೆಯಿತು.

ಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ನೀಡಿದ ತರಬೇತಿಯಲ್ಲಿ ಶಾಸ್ತ್ರೋಕ್ತವಾಗಿ ಲಲಿತ ಸಹಸ್ರನಾಮ ಪಾರಾಯಣ ಕಲಿತ 200 ಕ್ಕೂ ಅಧಿಕ ಮಹಿಳೆಯರು ಲಲಿತಾ ಸಹಸ್ರನಾಮ ಪಾರಾಯಣ ಮಾಡಿದರು. ರಾತ್ರಿ ಪೂರ್ಣಾಹುತಿಯಾಗಿ ಪ್ರಸಾದ ವಿತರಿಸಲಾಯಿತು. ಶ್ರೀ ದೇವಿಗೆ ಮಹಾಪೂಜೆ ನಡೆದು ಅನ್ನ ಸಂತರ್ಪಣೆ ನಡೆಯಿತು. ಶ್ರಿ ಶಾರದಾಂಬ ಸಮೂಹ ಸಮಿತಿಗಳ ಪದಾಧಿಕಾರಿಗಳು, ಸದಸ್ಯರು ನೂರರು ಮಂದಿ ಭಕ್ತರು ಉಪಸ್ಥಿತರಿದ್ದರು.












