ದುಬೈ: ನ್ಯೂಜಿಲೆಂಡ್ ತಂಡವು ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ಭಾರತಕ್ಕೆ ಗೆಲ್ಲಲು 252 ರನ್ಗಳ ಸಾಧಾರಣ ಗುರಿ ನೀಡಿದೆ. ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ 50 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 251 ರನ್ ಗಳಿಸಿದೆ. ಕಿವೀಸ್ಗೆ ವಿಲ್ ಯಂಗ್ ಮತ್ತು ರಚಿನ್ ರವೀಂದ್ರ ಉತ್ತಮ
ಆರಂಭ ನೀಡಿದರು. 29 ಎಸೆತಗಳಲ್ಲಿ 37 ರನ್ ಗಳಿಸಿದ್ದಾಗ ರಚಿನ್ ಕುಲದೀಪ್ ಯಾದವ್ ಎಸೆತದಲ್ಲಿ ಬೌಲ್ಡ್ ವಿಲ್ ಯಂಗ್ 15 ರನ್, ಕೇನ್ ವಿಲಿಯಮ್ಸನ್ 11 ರನ್ ಗಳಿಸಿ ಔಟಾದರು. ನ್ಯೂಜಿಲೆಂಡ್ ಪರ ಅತಿ ಹೆಚ್ಚು ರನ್ ಗಳಿಸಿದ ಡೇರಿಲ್ ಮಿಚೆಲ್ ಅವರು 101 ಎಸೆತಗಳಲ್ಲಿ 63 ರನ್ ಗಳಿಸಿದರು. ಗ್ಲೆನ್ ಫಿಲಿಪ್ 34 ರನ್ ಬಾರಿಸಿದರು. ಕೊನೆಯಲ್ಲಿ ಬಿರುಸಿನ ಆಟ ಆಡುದ ಮಿಚೆಲ್ ಬ್ರೇಸ್ವೆಲ್ ಅರ್ಧ ಶತಕ ಗಳಿಸಿದರು. ಬ್ರೇಸ್ವೆಲ್ 40 ಎಸೆತಗಳಲ್ಲಿ ಅಜೇಯ 53 ರನ್ ಗಳಿಸಿದರು.
ಭಾರತದ ಪರ ಶಿಸ್ತು ಬದ್ಧ ದಾಳಿ ಸಂಘಟಿಸಿದ ಸ್ಪಿನ್ನರ್ಗಳಾದ
ವರುಣ್ ಚಕ್ರವರ್ತಿ ಹಾಗೂ ಕುಲದೀಪ್ ಯಾದವ್ ತಲಾ 2 ವಿಕೆಟ್ ಕಿತ್ತರೆ ಶಮಿ ಹಾಗೂ ಜಡೇಜಾ ತಲಾ 1 ವಿಕೆಟ್ ಕಿತ್ತರು.