ದುಬೈ: ಚಾಂಪಿಯನ್ ಟ್ರೋಫಿ ಕ್ರಿಕೆಟ್ ಪಂದ್ಯದಲ್ಲಿ ಪಾಕಿಸ್ತಾನ ತಂಡ ಭಾರತಕ್ಕೆ 242 ರನ್ಗಳ ಗೆಲುವಿನ ಗುರಿ ನೀಡಿದೆ.
ಭಾರತದ ವಿರುದ್ಧ ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಮೊಹಮ್ಮದ್ ರಿಜ್ವಾನ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು.ಮೊದಲು ಬ್ಯಾಟ್ ಮಾಡಿದ
ಪಾಕಿಸ್ತಾನ 49.4 ಓವರ್ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 241 ರನ್ಗಳಿಸಿ, ಭಾರತಕ್ಕೆ 242 ರನ್ಗಳ ಗೆಲುವಿನ ಗುರಿ ನೀಡಿದೆ.ಪಾಕಿಸ್ತಾನದ ಸೌದ್ ಶಕೀಲ್ 62, ಮೊಹಮ್ಮದ್ ರಿಜ್ವಾನ್ 46, ಖುಷ್ದಿಲ್ ಶಾ 38 ರನ್ ಗಳಿಸಿ ತಂಡಕ್ಕೆ ನೆರವಾದರು. ಉಳಿದಂತೆ ಯಾವ ಬ್ಯಾಟರ್ ಕೂಡ ಭಾರತೀಯ ಬೌಲರ್ಗಳ ಎದುರು ಹೆಚ್ಚು ಹೊತ್ತು ಕ್ರೀಸ್ನಲ್ಲಿ ನಿಲ್ಲಲ್ಲಿಲ್ಲ.
ಪಾಕ್ ವಿರುದ್ಧ ಭಾರತದ ಬೌಲರ್ಗಳ ಉತ್ತಮ ದಾಳಿ ನಡೆಸಿದರು. ಕುಲದೀಪ್ ಯಾದವ್ 3, ಪಾಂಡ್ಯ 2, ಜಡೇಜ, ರಾಣ ಹಾಗೂ ಅಕ್ಷರ್ ತಲಾ ಒಂದು ವಿಕೆಟ್ ಪಡೆದರು.