ಕೋಟಯಂ: ಇತ್ತೀಚೆಗೆ ನಿಧನ ಹೊಂದಿದ ಕಾಂಗ್ರೆಸ್ನ ಹಿರಿಯ ನಾಯಕ, ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರ ಪುತುಪಳ್ಳಿ ಕ್ಷೇತ್ರದಲ್ಲಿ ನಡೆದ ಉಪಚುನಾವಣೆಯಲ್ಲಿ ಯುಡಿಎಫ್ ಅಭ್ಯರ್ಥಿ, ಉಮ್ಮನ್ ಚಾಂಡಿ ಅವರ ಪುತ್ರ ಚಾಂಡಿ ಉಮ್ಮನ್ ಭರ್ಜರಿ ಗೆಲುವು ಸಾಧಿಸಿದ್ದಾರೆ. 40,111 ಮತಗಳ ದಾಖಲೆ ಅಂತರದಲ್ಲಿ
ಚಾಂಡಿ ಉಮ್ಮನ್ ಗೆಲುವು ಸಾಧಿಸಿದ್ದಾರೆ. ಕೇರಳದ ಕೋಟ್ಟಯಂ ಜಿಲ್ಲೆಯ ಪುತುಪಳ್ಳಿ ಕ್ಷೇತ್ರದಲ್ಲಿ ಎಲ್ಡಿಎಫ್ ಅಭ್ಯರ್ಥಿ ಜೆಯ್ಕ್ ಸಿ ಥಾಮಸ್, ಬಿಜೆಪಿ ಅಭ್ಯರ್ಥಿ ಲಿಜಿನ್ ಲಾಲ್ ಸೇರಿ ಏಳು ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದರು. ಉಮ್ಮನ್ ಚಾಂಡಿ 50 ವರ್ಷಗಳ ಕಾಲ ಶಾಸಕರಾಗಿದ್ದ ಪುತುಪಳ್ಳಿ ಕ್ಷೇತ್ರವನ್ನು ಅವರ ಪುತ್ರ ಚಾಂಡಿ ಉಮ್ಮನ್ ಮೂಲಕ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮತ್ತೆ ಗೆದ್ದುಕೊಂಡಿದೆ. ಪುತುಪಳ್ಳಿ ಸೇರಿ ದೇಶದ ವಿವಿಧ ರಾಜ್ಯಗಳಲ್ಲಿನ ಒಟ್ಟು 7 ವಿಧಾನಸಭೆ ಸ್ಥಾನಗಳಿಗೆ ಸೆಪ್ಟಂಬರ್ 5 ರಂದು ಉಪ ಚುನಾವಣೆ ನಡೆದಿತ್ತು. ಈ ಎಲ್ಲಾ ಕ್ಷೇತ್ರಗಳ ಚುನಾವಣಾ ಫಲಿತಾಂಶ ಇಂದು ಹೊರ ಬರಲಿದೆ. ತ್ರಿಪುರದ 2 ಸ್ಥಾನ ಹಾಗೂ ಕೇರಳ, ಝಾರ್ಖಂಡ್, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ ಮತ್ತು ಉತ್ತರಾಖಂಡದ ತಲಾ 1 ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿತ್ತು.