ಸುಳ್ಯ: ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್ ಸುಳ್ಯ, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಸುಳ್ಯ ಹಾಗೂ ದಸರಾ ಉತ್ಸವ ಸಮಿತಿ ಇದರ ಆಶ್ರಯದಲ್ಲಿ 52ನೇ ವರ್ಷದ ಶ್ರೀ ಶಾರದಾಂಬಾ ಉತ್ಸವ ‘ಸುಳ್ಯ ದಸರಾ’ ಅಂಗವಗಿ ಅ.26 ರಂದು ಲೋಕ ಕಲ್ಯಾಣಾರ್ಥವಾಗಿ ಸಾರ್ವಜನಿಕ ಮಹಾಗಣಪತಿ ಹವನ ಸಹಿತ ಚಂಡಿಕಾ ಮಹಾಯಾಗ ನಡೆಯಿತು. ಶ್ರೀ
ಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಸಹಕಾರದಲ್ಲಿ ಮಹಾಯಾಗ ನಡೆಯಿತು. ಪ್ರತಿಷ್ಠಾನದ ಅಧ್ಯಕ್ಷ ಪುರೋಹಿತ ನಾಗರಾಜ ಭಟ್ ಹಾಗೂ ಬಳಗದ ನೇತೃತ್ವದಲ್ಲಿ ಬೆಳಿಗ್ಗೆ 8 ರಿಂದ ಆರಂಭಗೊಂಡ ಮಹಾಯಾಗಕ್ಕೆ 12.30ಕ್ಕೆ ಪೂರ್ಣಾಹುತಿಯಾಗಿ ಬಳಿಜ ಮಹಾ ಪೂಜೆ ನೆರವೇರಿ ಅನ್ನಸಂತರ್ಪಣೆ ನಡೆಯಿತು.
ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಗೌರವಾಧ್ಯಕ್ಷ ಕೆ.ಗೋಕುಲ್ದಾಸ್, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿಯ ಅಧ್ಯಕ್ಷ ಚಿದಾನಂದ ವಿದ್ಯಾನಗರ, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ದಸರಾ ಸೇವಾ ಟ್ರಸ್ಟ್ನ ಉಪಾಧ್ಯಕ್ಷರಾದ ನಾರಾಯಣ ಕೇಕಡ್ಕ, ದಸರಾ ಉತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಬೂಡು ರಾಧಾಕೃಷ್ಣ ರೈ, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ರವಿಚಂದ್ರ ಕೊಡಿಯಾಲಬೈಲು, ಕೋಶಾಧಿಕಾರಿ ಪುರುಷೋತ್ತಮ ಕೆ, ಶಾರದಾಂಬಾ ಸೇವಾ ದಸರಾ ಸೇವಾ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸತೀಶ್ ಎಂ.ಕೆ ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿಯ ನಿರ್ದೇಶಕರಾದ ರಾಜು ಪಂಡಿತ್, ಚಂದ್ರಶೇಖರ ಪಂಡಿತ್ ಮತ್ತಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.