ಸುಳ್ಯ:ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್ ಸುಳ್ಯ , ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು ಹಾಗೂ ಶ್ರೀ ಶಾರದಾಂಬ ಉತ್ಸವ ಸಮಿತಿ ವತಿಯಿಂದ ನಡೆಯುತ್ತಿರುವ 55ನೇ ವರ್ಷದ ಶಾರದಾಂಬ ಉತ್ಸವ ‘ಸುಳ್ಯ ದಸರಾ’ ಅಂಗವಾಗಿ
ಅ.22 ರಂದು ಸಾರ್ವಜನಿಕ ಶ್ರೀ ಚಂಡಿಕಾ ಮಹಾಯಾಗ ನಡೆಯಿತು. ಶ್ರೀ ಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಸಹಕಾರದಲ್ಲಿ
ಪ್ರತಿಷ್ಠಾನದ ಅಧ್ಯಕ್ಷ ವೇದಮೂರ್ತಿ ನಾಗರಾಜ ಭಟ್ ನೇತೃತ್ವದಲ್ಲಿ ಶ್ರೀ ಶಾರದಾಂಬಾ ಕಲಾವೇದಿಕೆಯಲ್ಲಿ ಶ್ರೀ
ಚಂಡಿಕಾ ಮಹಾಯಾಗ ನಡೆಯಿತು. ಜೊತೆಗೆ

ಮಹಿಳೆಯರಿಂದ ಸಾಮೂಹಿಕ ಲಲಿತ ಸಹಸ್ರನಾಮ ಪಾರಾಯಣ ನಡೆಯಿತು. ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ ಅಧ್ಯಕ್ಷ ನಾರಾಯಣ ಕೇಕಡ್ಕ ಹಾಗು ದಸರಾ ಸಮೂಹ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಚಂಡಿಕಾಯಾಗಕ್ಕೆ ಭಾರೀ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿದ್ದರು.








