
ಸುಳ್ಯ:ಸುಳ್ಯದ ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಮತ್ತು ಸುಳ್ಯ ತಾಲೂಕು ದಸರ ಉತ್ಸವ ಸಮಿತಿಯ ಆಶ್ರಯದಲ್ಲಿ ಶ್ರೀ ಶಾರದಾಂಬಾ ವೇದಿಕೆಯಲ್ಲಿ ನಡೆಯುತ್ತಿರುವ 51ನೇ ವರ್ಷದ ಶ್ರೀ ಶಾರದಾಂಬಾ ಉತ್ಸವ – ಸುಳ್ಯ ದಸರಾದ ಅಂಗವಾಗಿ ಲೋಕ ಕಲ್ಯಾಣಾರ್ಥವಾಗಿ ಚಂಡಿಕಾ ಮಹಾಯಾಗ

ನಡೆಯುತಿದೆ. ಸುಳ್ಯದ ಶ್ರೀ ಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಅಧ್ಯಕ್ಷ ಪುರೋಹಿತ ನಾಗರಾಜ ಭಟ್ ಮತ್ತು ಬಳಗದವರಿಂದ ಶ್ರೀ ಮಹಾಗಣಪತಿ ಹವನ ಸಹಿತ ಶ್ರೀ ಚಂಡಿಕಾ ಮಹಾಯಾಗ ನಡೆಯುತಿದೆ. ಸಂಘಟನಾ ಸಮಿತಿಗಳ ಪದಾಧಿಕಾರಿಗಳು ಸಮೂಹ ಪ್ರಾರ್ಥನೆ ನಡೆಸಿದ ಬಳಿಕ ಯಾಗ ಆರಂಭಗೊಂಡಿತು. 12.30ಕ್ಕೆ ಪೂರ್ಣಾಹುತಿ ನಡೆಯಲಿದೆ. ಬಳಿಕ ಮಹಾಪೂಜೆ, ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಲಿದೆ.ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿಯ ಗೌರವಾಧ್ಯಕ್ಷ ಕೆ.ಗೋಕುಲ್‌ದಾಸ್, ಅಧ್ಯಕ್ಷ ಚಿದಾನಂದ ವಿದ್ಯಾನಗರ,
ಶಾರದಾಂಬಾ ದಸರಾ ಸೇವಾ ಟ್ರಸ್ಟ್‌ನ ಉಪಾಧ್ಯಕ್ಷ ನಾರಾಯಣ ಕೇಕಡ್ಕ ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ರವಿಚಂದ್ರ ಕೊಡಿಯಾಲಬೈಲು, ಕೋಶಾಧಿಕಾರಿ ಪ್ರದೀಪ್ ಕೆ.ಎನ್, ಬೂಡು ರಾಧಾಕೃಷ್ಣ ರೈ,ಜನಾರ್ಧನ, ಪುರುಷೋತ್ತಮ ಮತ್ತಿತರರು ಉಪಸ್ಥಿತರಿದ್ದರು.