ಸುಳ್ಯ: ಸಮಾಜದ ಅಭಿವೃದ್ಧಿಗಾಗಿ ಸದಾ ಪ್ರಯತ್ನ ನಡೆಸುವವರು ಸಹಕಾರಿಗಳು, ಸಹಕಾರ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ತನ್ನ ಸ್ತುತ್ಯರ್ಹ ಸೇವೆಯ ಮೂಲಕ ಡೈನಮಿಕ್ ಲೀಡರ್ಶಿಪ್ ಬೆಳೆಸಿದವರು ಚಂದ್ರಾ ಕೋಲ್ಚಾರ್ ಎಂದು ಪುತ್ತೂರಿನ ಮಾಜಿ ಶಾಸಕರಾದ ಸಂಜೀವ ಮಠಂದೂರು ಹೇಳಿದ್ದಾರೆ. ಸಹಕಾರಿ ರತ್ನ ಚಂದ್ರ ಕೋಲ್ಚಾರ್ ಅಭಿನಂದನಾ ಸಮಿತಿ ವತಿಯಿಂದ ಸುಳ್ಯ ಲಯನ್ಸ್ ಸೇವಾ ಸದನದಲ್ಲಿ ನಡೆದ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ
ನಿಯಮಿತ ಬೆಂಗಳೂರು, ಇದರ ನೂತನ ನಿರ್ದೇಶಕರಾಗಿ

ಬಹುಮತದಿಂದ ಆಯ್ಕೆಯಾಗಿರುವ ಚಂದ್ರ ಕೋಲ್ಟಾರ್ ಅವರ ಅಭಿನಂದನಾ ಸಮಾರಂಭ ಮತ್ತು ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ
ನಿಯಮಿತ ಬೆಂಗಳೂರು ಇದರ ನೂತನ ಅಧ್ಯಕ್ಷ ಎಸ್.ಚಂದ್ರಶೇಖರ ಮೈಸೂರು ಇವರ ಅಧಿಕೃತ ಭೇಟಿ ಕಾರ್ಯಕ್ರಮದಲ್ಲಿ ಚಂದ್ರಾ ಕೋಲ್ಚಾರ್ ಹಾಗೂ ಎಸ್.ಚಂದ್ರಶೇಖರ ಮೈಸೂರು
ಅವರನ್ನು ಸನ್ಮಾನಿಸಿ ಮಾತನಾಡಿದರು. ಸಾಧಕರಿಗೆ ಮಾಡಿದ ಅಭಿನಂದನಾ ಸಮಾರಂಭ ಉತ್ತಮ ಸಂದೇಶ ನೀಡಿದೆ ಮಠಂದೂರು ಹೇಳಿದರು.
ಅಭಿನಂದನಾ ಭಾಷಣ ಮಾಡಿದ ರಾಷ್ಟ್ರಪ್ರಶಸ್ತಿ ಪುರಸ್ಕೃತ ಕೆ. ಆರ್.ಗಂಗಾಧರ ಮಾತನಾಡಿ ಸಹಕಾರ, ಶಿಕ್ಷಣ, ರಾಜಕೀಯ ಸೇರಿ ಎಲ್ಲಾ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸಮಾಜಕ್ಕಾಗಿ ದೀಪದಂತೆ ಬೆಳಕು ನೀಡುತ್ತಿರುವವರು ಚಂದ್ರಾ ಕೋಲ್ಚಾರ್ ಎಂದರು. ಸಾಧನೆ ಮಾಡಿದವರಿಗೆ ಮಾಡುವ ಸನ್ಮಾನ ಸಾಧನೆಗೆ ಇನ್ನಷ್ಟು ಸ್ಫೂರ್ತಿ ಎಂದು ಅವರು ಹೇಳಿದರು.

ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ
ರಾಜ್ಯಾಧ್ಯಕ್ಷ ಎಸ್. ಚಂದ್ರಶೇಖರ್ ಅವರು ದೀಪ ಬೆಳಗಿಸಿ ಸಮಾರಂಭವನ್ನು ಉದ್ಘಾಟಿಸಿದರು.
ಸುಳ್ಯದ ಹಿರಿಯ ಸಹಕಾರಿ ಜಾಕೆ ಮಾಧವ ಗೌಡ ಅಧ್ಯಕ್ಷತೆ ವಹಿಸಿದ್ದರು. ಶಾಸಕಿ ಭಾಗೀರಥಿ ಮುರುಳ್ಯ, ಸುಳ್ಯ ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿರೆ, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ, ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ.ಮುಸ್ತಫ, ಮೀನುಗಾರಿಕಾ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎ.ವಿ.ತೀರ್ಥರಾಮ, ಗೌಡರ ಯಾನೆ ಒಕ್ಕಲಿಗರ ಜಿಲ್ಲಾ

ಮಾತೃ ಸಂಸ್ಥೆಯ ಅಧ್ಯಕ್ಷ ಲೋಕಯ್ಯ ಗೌಡ.ಕೆ, ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಕೆ.ಸಿ.ಸದಾನಂದ, ಮಾಜಿ ಅಧ್ಯಕ್ಷ ಪಿ.ಸಿ.ಜಯರಾಮ, ಕ್ರೈಸ್ತ ಅಲ್ಪ ಸಂಖ್ಯಾತರ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ ಅಧ್ಯಕ್ಷ ಬಿಟ್ಟಿ.ಬಿ.ನೆಡುನಿಲಂ, ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್.ಗಂಗಾಧರ ಅತಿಥಿಗಳಾಗಿದ್ದರು.

ಅಭಿನಂದನಾ ಸಮಿತಿಯ ಅಧ್ಯಕ್ಷ ಎಸ್.ಆರ್.ಸೂರಯ್ಯ ಸ್ವಾಗತಿಸಿದರು. ಸಂಚಾಲಕರಾದ ದಿನೇಶ್ ಮಡಪ್ಪಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೋಶಾಧಿಕಾರಿ ಕೆ.ಟಿ.ವಿಶ್ವನಾಥ ವಂದಿಸಿದರು. ಲತಾಶ್ರೀ ಸುಪ್ರೀತ್ ಮೋಂಟಡ್ಕ ಕಾರ್ಯಕ್ರಮ ನಿರೂಪಿಸಿದರು.
ಸಹಕಾರಿ ರತ್ನ ಚಂದ್ರ ಕೋಲ್ಚಾರ್ ಅಭಿನಂದನಾ ಸಮಿತಿಯ ಪ್ರಧಾನ ಕಾರ್ಯದರ್ಶಿ ದಿನೇಶ್ ಕೋಲ್ಚಾರು, ಉಪಾಧ್ಯಕ್ಷರಾದ ಪುರುಷೋತ್ತಮ ಕೋಲ್ಚಾರು, ಚಂದ್ರಶೇಖರ ಪೇರಾಲು, ತಿಮ್ಮಯ್ಯ ಪಿಂಡಿಮನೆ,
ಜತೆ ಕಾರ್ಯದರ್ಶಿಗಳಾದ ಸುಪ್ರೀತ್ ಮೋಂಟಡ್ಕ, ಪ್ರೀತಮ್ ಡಿ.ಕೆ ಉಪಸ್ಥಿತರಿದ್ದರು.

