ವಿಜಯವಾಡ:ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಹಾಗೂ ಎನ್ಡಿಎ ಶಾಸಕಾಂಗ ಪಕ್ಷದ ನಾಯಕ ಎನ್. ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ವಿಜಯವಾಡದ ಹೊರವಲಯದಲ್ಲಿರುವ ಗನ್ನವರಂ ವಿಮಾನ ನಿಲ್ದಾಣದ ಬಳಿ ಇರುವ ಕೆಸರಪಲ್ಲಿ ಐಟಿ ಪಾರ್ಕ್ನಲ್ಲಿ ನಡೆದ
ಸಮಾರಂಭದಲ್ಲಿ ನಾಯ್ಡು ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ರಾಜ್ಯಪಾಲ ಎಸ್.ಅಬ್ದುಲ್ ನಜೀರ್ ಅವರು ಪ್ರಮಾಣವಚನ ಬೋಧಿಸಿದರು.ನಾಯ್ಡು ಅವರು ನಾಲ್ಕನೇ ಅವಧಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದರು. ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಸಚಿವರಾಗಿ ಜನಸೇನಾದ ಪವನ್ ಕಲ್ಯಾಣ್, ನಾರಾ ಲೋಕೇಶ್ ಸಹ ಪ್ರಮಾಣವಚನ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಎನ್ಡಿಎ ಮೈತ್ರಿಕೂಟದ ನಾಯಕರು ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.
ನಾಯ್ಡು ಅವರು 1995ರಿಂದ 1999, 2004ರಿಂದ 2009 ಹಾಗೂ 2014ರಿಂದ 2019ರ ವರೆಗೆ ಒಟ್ಟು ಮೂರು ಬಾರಿ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿದ್ದರು. ಈ ಬರಿ ವಿಧಾನಸಭೆಯ 175 ಸ್ಥಾನಗಳ ಪೈಕಿ ಟಿಡಿಪಿ 135, ಜನಸೇನಾ 21, ಬಿಜೆಪಿ 8 ಹಾಗೂ ವೈಎಸ್ಆರ್ಸಿಪಿ 11 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಅಧಿಕಾರಕ್ಕೆ ಏರಿದ್ದಾರೆ







