ಸುಳ್ಯ:ತಮಿಳು ಕಾರ್ಮಿಕ ಮುಖಂಡ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ, ಕಾಂಗ್ರೆಸ್ ಮುಖಂಡ ಚಂದ್ರಲಿಂಗಂ ಬೇಂಗಮಲೆ ನಿಧನರಾಗಿದ್ದಾರೆ. ಅಸೌಖ್ಯದಿಂದ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಅವರು ಇಂದು ನಿಧನರಾದರು ಎಂದು ತಿಳಿದುಬಂದಿದೆ.ಕಳೆದ ಕೆಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಚಂದ್ರಲಿಂಗಮ್ ಅವರನ್ನು
ಮೈಸೂರಿನ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ನಿಧನ ರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿದ್ದಾರೆ.ಚಂದ್ರಲಿಂಗಮ್ ಅವರು ಗ್ರಾಮ ಪಂಚಾಯತ್ ಸದಸ್ಯರಾಗಿ, ತಾಲೂಕು ಪಂಚಾಯತ್ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.ಸುಳ್ಯ ಬ್ಲಾಕ್ ಅಸಂಘಟಿತ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ತಮಿಳು ಕಾರ್ಮಿಕ ಮುಖಂಡರಾಗಿ ಪುನರ್ವಸತಿದಾರರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದರು. ಇವರು ಪತ್ನಿ, ಮಗಳು ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.














