ಸುಬ್ರಹ್ಮಣ್ಯ:ಸುಳ್ಯ ತಾಲೂಕು ಪಂಚಾಯತ್ ಮಾಜಿ ಸದಸ್ಯ ಹಿರಿಯ ರಾಜಕೀಯ ಧುರೀಣ ಚಂದ್ರಶೇಖರ ಮೇಲ್ನಾಡು(74) ನಿಧನರಾದರಾಗಿದ್ದಾರೆ. ಇಂದು ಬೆಳಿಗ್ಗೆ ತೀವ್ರ ಹೃದಯಘಾತದಿಂದ ಅಸ್ವಸ್ಥರಾದ ಅವರನ್ನು ಅವರ ಪುತ್ರ ಗುರುಪ್ರಸಾದ್ ಮೇಲ್ನಾಡು ಅವರು ಕಡಬ ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿ ಮಧ್ಯೆ ಅವರು
ಕೊನೆಯುಸಿರೆಳೆದರು ಎಂದು ತಿಳಿದು ಬಂದಿದೆ.
ಚಂದ್ರಶೇಖರ ಮೇಲ್ನಾಡು ಅವರು ಗುತ್ತಿಗಾರು ಕ್ಷೇತ್ರದಿಂದ ಸುಳ್ಯ ತಾಲೂಕು ಪಂಚಾಯತ್ ಸದಸ್ಯರಾಗಿ, ಏನೆಕಲ್ಲು ಸಹಕಾರಿ ಬ್ಯಾಂಕಿನ ಅಧ್ಯಕ್ಷರಾಗಿ, ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಧಾರ್ಮಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರಿಯರಾಗಿ ದುಡಿದ ಚಂದ್ರಶೇಖರ ಮೇಲ್ನಾಡುರವರು ಕೆಲ ವರ್ಷಗಳಿಂದ ರಾಜಕೀಯ ಚಟುವಟಿಕೆಗಳಿಂದ ದೂರ ಉಳಿದಿದ್ದರು.ಮೃತರು ಪತ್ನಿ, ಪುತ್ರ, ಇಬ್ಬರು ಪುತ್ರಿಯರು, ಸೊಸೆ, ಅಳಿಯಂದಿರು, ಮೊಮ್ಮಕ್ಕಳು, ಕುಟುಂಬಸ್ಥರು ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.