ಸುಳ್ಯ:ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಚಂದ್ರಶೇಖರ ಪೇರಾಲು ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತು ಹಾಗು ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಸನ್ಮಾನ ಕಾರ್ಯಕ್ರಮ ಕನ್ನಡ ಭವನದಲ್ಲಿ ನಡೆಯಿತು.
ಎಒಎಲ್ಇ ಅಧ್ಯಕ್ಷ ಡಾ. ಕೆ.ವಿ.ಚಿದಾನಂದ ಸಮಾರಂಭವನ್ನು ಉದ್ಘಾಟಿಸಿದರು. ಡಾ.ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ ಹಾಗು
ಆಚಾರ್ಯ ಪ್ರಶಸ್ತಿ ಪಡೆದ ಪೇರಾಲು ಅವರನ್ನು
ಸುಳ್ಯ ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಡಾ.ಹರಪ್ರಸಾದ್ ತುದಿಯಡ್ಕ ಸನ್ಮಾನಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಕಸಾಪ ಮಾಜಿ ಅಧ್ಯಕ್ಷೆ ಎಂ.ಮೀನಾಕ್ಷಿ ಗೌಡ ವಹಿಸಿದ್ದರು. ಹಿರಿಯ ಸಾಹಿತಿ ಡಾ.ಪ್ರಭಾಕರ ಶಿಶಿಲ ಅಭಿನಂದನಾ ಭಾಷಣ ಮಾಡಿದರು.ಮುಖ್ಯ ಅತಿಥಿಗಳಾಗಿ
ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ,ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ,ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಅಧ್ಯಕ್ಷ ಎಸ್.ಸಂಶುದ್ದೀನ್,ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷೆ ಲತಾ ಮದುಸೂಧನ್, ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್.ಗಂಗಾಧರ, ಲಯನ್ಸ್ ಕ್ಲಬ್ ಅಧ್ಯಕ್ಷ ವಿನೋದ್ ಲಸ್ರಾದೋ,
ವರ್ತಕರ ಸಂಘದ ಅಧ್ಯಕ್ಷ ಅಬ್ದುಲ್ ಹಮೀದ್ ಜನತಾ, ರೋಟರಿ ಕ್ಲಬ್ ಸುಳ್ಯ ಸಿಟಿ ಅಧ್ಯಕ್ಷ ರಾಗೇಶ್ ರಾಘವ್, ಜೆಸಿಐ ಸುಳ್ಯ ಪಯಸ್ವಿನಿ ಅಧ್ಯಕ್ಷೆ ಲತಾಶ್ರೀ ಸುಪ್ರೀತ್ ಮೋಂಟಡ್ಕ, ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಪವನ್ ಪಲ್ಲತ್ತಡ್ಕ,ಕಸಾಪ ಹೋಬಳಿ ಘಟಕದ ಅಧ್ಯಕ್ಷರಾದ ಚಂದ್ರಾವತಿ ಬಡ್ಡಡ್ಕ, ಬಾಬು ಗೌಡ ಅಚ್ರಪ್ಪಾಡಿ, ಕಸಾಪ ಗೌರವ ಕಾರ್ಯದರ್ಶಿ ತೇಜಸ್ವಿ ಕಡಪಳ, ಕಸಾಪ ಜಿಲ್ಲಾ ಪ್ರತಿನಿಧಿ ರಾಮಚಂದ್ರ ಪಲ್ಲತ್ತಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಕಸಾಪ ಕೋಶಾಧಿಕಾರಿ ದಯಾನಂದ ಆಳ್ವ ಸ್ವಾಗತಿಸಿದರು. ಗೌರವ ಕಾರ್ಯದರ್ಶಿ ಚಂದ್ರಮತಿ.ಕೆ. ಕಾರ್ಯಕ್ರಮ ನಿರೂಪಿಸಿದರು.
ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ, ಗೌಡರ ಯುವ ಸೇವಾ ಸಂಘ ಸುಳ್ಯ, ರೋಟರಿ ಕ್ಲಬ್ ಸುಳ್ಯ, ಲಯನ್ಸ್ ಕ್ಲಬ್ ಸುಳ್ಯ, ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ, ಯುವಜನ ಸಂಯುಕ್ತ ಮಂಡಳಿ ಸುಳ್ಯ,ವರ್ತಕರ ಸಂಘ ಸುಳ್ಯ, ಜೇಸಿಐ ಸುಳ್ಯ ಪಯಸ್ವಿನಿ, ರೋಟರಿ ಕ್ಲಬ್ ಸುಳ್ಯ ಸಿಟಿ ಇದರ ಆಶ್ರಯದಲ್ಲಿ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.











