ಬೆಂಗಳೂರು: ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಬಾಹ್ಯಾಕಾಶ ನೌಕೆಯು ಬುಧವಾರ ಚಂದ್ರನ ಐದನೇ ಹಾಗೂ ಅಂತಿಮ ಕಕ್ಷೆಯನ್ನು ಯಶಸ್ವಿಯಾಗಿ ಪ್ರವೇಶಿಸಿತು. ಆ ಮೂಲಕ ಚಂದ್ರನ ಮೇಲ್ಮೈಗೆ ಇನ್ನಷ್ಟು ಹತ್ತಿರವಾಗಿದೆ.ಈ ಕುರಿತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ತಿಳಿಸಿದ್ದು, ಚಂದ್ರನ ಕಕ್ಷೆಗೆ ಅಂತಿಮ
ಪರಿಚಲನೆಯು ಪೂರ್ಣಗೊಂಡಿದೆ ಎಂದು ಹೇಳಿದೆ. ಈಗ ಲ್ಯಾಂಡರ್ ಮಾಡ್ಯೂಲ್ನಿಂದ ಪ್ರೊಪಲ್ಷನ್ ಮಾಡ್ಯೂಲ್ (ಉಡ್ಡಯನ ವಾಹಕ) ಪ್ರತ್ಯೇಕಿಸುವ ಸಮಯ. ಇದಕ್ಕೆ ಆಗಸ್ಟ್ 17ರಂದು ಮುಹೂರ್ತ ನಿಗದಿಯಾಗಿದೆ ಎಂದು ತಿಳಿಸಿದೆ. ಜುಲೈ 14ರಂದು ಉಡಾವಣೆಗೊಂಡ ಚಂದ್ರಯಾನ-3 ಆಗಸ್ಟ್ 5ರಂದು ಚಂದ್ರನ ಕಕ್ಷೆ ಪ್ರವೇಶಿಸಿತು. ಅದಾದ ಬಳಿಕ ಸತತ ಮೂರು ಕಕ್ಷೆ ಪರಿಚಲನೆ ಮೂಲಕ ಚಂದ್ರನ ಮೇಲ್ಮೈಯ ಸನಿಹಕ್ಕೆ ತಲುಪಿದೆ.
ಆಗಸ್ಟ್ 23ರಂದು ಸಾಫ್ಟ್ ಲ್ಯಾಂಡಿಂಗ್ ಮೂಲಕ ಚಂದ್ರನ ಮೇಲ್ಮೈಯಲ್ಲಿ ಲ್ಯಾಂಡರ್ ಅನ್ನು ಸುರಕ್ಷಿತವಾಗಿ ಇಳಿಸಲು ಯೋಜಿಸಲಾಗಿದೆ.