ಸುಳ್ಯ: ಚಂದ್ರಯಾನ-3 ಯಶಸ್ವಿಗಾಗಿ ಗ್ರಾಮದ ದೇವಾಲಯಗಳಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಬೇಕು ಎಂದು ಸುಳ್ಯ ಬಿಜೆಪಿ ಮಂಡಲ ಸಮಿತಿ ಕರೆ ನೀಡಿದೆ. ಬುಧವಾರ ಚಂದ್ರಯಾನ-3 ಮಿಷನ್ ಯಶಸ್ವಿಯಾಗಿ ಲ್ಯಾಂಡಿಂಗ್ ಆಗುವ ಮೂಲಕ ವಿಶ್ವದಲ್ಲಿ ಭಾರತದ ಗೌರವ ಹೆಚ್ಚಾಗಬೇಕು
ಮತ್ತು ನಮ್ಮ ದೇಶದ ಹೆಮ್ಮೆಯ ವಿಜ್ಞಾನಿಗಳ ಮಹಾ ಪರಿಶ್ರಮವು ಸಾರ್ಥಕವಾಗಬೇಕು ಎಂಬುದು ನಮ್ಮೆಲ್ಲರ ಆಶಯವಾಗಿದೆ. ಇಡೀ ಜಗತ್ತು ಈ ಸಮಯಕ್ಕಾಗಿ ಕಾತುರದಿಂದ ಕಾಯುತ್ತಿದೆ. ಹಾಗೆಯೇ ಯಶಸ್ವಿಯಾಗಿ ಲ್ಯಾಂಡಿಂಗ್ ಆಗಲೆಂದು ದೇಶದಾದ್ಯಂತ ಎಲ್ಲರೂ ದೇವರಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ನಾಳೆ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಎಲ್ಲರೂ ಊರಿನ ಅಥವಾ ಗ್ರಾಮದ ದೇವಸ್ಥಾನ ಮಂದಿರಗಳಲ್ಲಿ ಒಟ್ಟು ಸೇರಿ ಚಂದ್ರಯಾನ 3 ಯಶಸ್ವಿಯಾಗಿ ಲ್ಯಾಂಡಿಂಗ್ ಆಗಲಿ ಎಂದು ದೇವರಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸೋಣ ಎಂದು
ಬಿಜೆಪಿ ಸುಳ್ಯ ಮಂಡಲ ಸಮಿತಿ ಪ್ರಕಟಣೆಯಲ್ಲಿ ವಿನಂತಿಸಿದೆ.