ಸುಳ್ಯ: ಚಂದ್ರಯಾನ 3 ಯಶಸ್ಸಿನ ಹಿನ್ನಲೆಯಲ್ಲಿ ಸುಳ್ಯ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ ನಡೆಯಿತು. ಚಂದ್ರಯಾನದ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಇಳಿದುದನ್ನು ನೇರ ಪ್ರಸಾರ ವೀಕ್ಷಣೆ ಮಾಡಿದ ಬಳಿಕ ವಿಜಯೋತ್ಸವ ಆಚರಿಸಿದರು.
ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ಸುಬೋದ್ ಮೇನಾಲ, ವಿನಯಕುಮಾರ್ ಕಂದಡ್ಕ, ಸುನಿಲ್ ಕೇರ್ಪಳ, ಮಹೇಶ್ ಕುಮಾರ್ ಮೇನಾಲ, ಬೂಡು ರಾಧಾಕೃಷ್ಣ ರೈ, ಜಿನ್ನಪ್ಪ ಪೂಜಾರಿ, ಸುಧಾಕರ ಕುರುಂಜಿಭಾಗ್ ಮತ್ತಿತರರು ಉಪಸ್ಥಿತರಿದ್ದರು.
previous post