ಮಂಗಳೂರು:ರಾಷ್ಟ್ರೀಯ ಹೆದ್ದಾರಿ-73 ರ ಮಂಗಳೂರು- ಮೂಡಿಗೆರೆ-ತುಮಕೂರು ವಿಭಾಗದ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ 10.8 ಕಿ.ಮೀ.ಉದ್ದದ ಪೇವ್ದ್ ಶೋಲ್ಡರ್ ನೊಂದಿಗೆ ದ್ವಿಪಥ ರಸ್ತೆಯಾಗಿ ಅಗಲೀಕರಣ ಕಾಮಗಾರಿಗೆ ಇಪಿಸಿ ಆಧಾರದಲ್ಲಿ ಅನುಮೋದನೆ ನೀಡಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವುದಾಗಿ ಕೇಂದ್ರ ರಸ್ತೆ ಸಾರಿಗೆ ಹಾಗೂ
ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿಯವರು ದಕ್ಷಿಣ ಕನ್ನಡ ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ರವರಿಗೆ ಪತ್ರ ಬರೆದು ತಿಳಿಸಿರುತ್ತಾರೆ. 2023-24ನೇ ಸಾಲಿನ ವಾರ್ಷಿಕ ಯೋಜನೆಯಡಿಯಲ್ಲಿ ಸುಮಾರು ರೂ. 343.74 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ರಸ್ತೆಯು ಉತ್ತಮ ಸಂಪರ್ಕವನ್ನು ಒದಗಿಸಲಿದ್ದು, ಜಿಲ್ಲೆಯಆರ್ಥಿಕ ಬೆಳವಣಿಗೆಗೆ ಅಗತ್ಯವಾದ ಬೆಂಬಲವನ್ನು ಒದಗಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸಲಿದೆ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ









