ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರು ವಿಧಿವಶರಾಗಿದ್ದಾರೆ. ಅವರಿಗೆ (85) ಉಸಿರಾಟದ ತೊಂದರೆ ಹಾಗೂ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ 4 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು
ಸಂಜೆ ನಿಧನರಾಗಿದ್ದಾರೆ.ದೇವೇಗೌಡರು ರಾಜ್ಯ ಹಾಗೂ ರಾಷ್ಟ್ರ ರಾಜಕೀಯದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದ ಸಂದರ್ಭದಲ್ಲಿ ಕುಟುಂಬದ ಸಂಪೂರ್ಣ ಜವಾಬ್ದಾರಿಯನ್ನು ಚೆನ್ನಮ್ಮ ಸಮರ್ಥವಾಗಿ ನಿಭಾಯಿಸಿದ್ದರು.ಚೆನ್ನಮ್ಮ ಹಾಗೂ ದೇವೇಗೌಡ ದಂಪತಿಗೆ ನಾಲ್ವರು ಪುತ್ರರು ಮತ್ತು ಇಬ್ಬರು ಪುತ್ರಿಯರು ಇದ್ದಾರೆ.ಎಚ್.ಡಿ. ರೇವಣ್ಣ, ಎಚ್.ಡಿ. ಬಾಲಕೃಷ್ಣ, ಎಚ್.ಡಿ. ರಮೇಶ್ ಗೌಡ, ಎಚ್.ಡಿ. ಕುಮಾರಸ್ವಾಮಿ, ಶೈಲಜಾ ಹಾಗೂ ಅನಸೂಯಾ.
ಕುಟುಂಬದ ಹಿರಿಯರಾಗಿ ಎಲ್ಲರಿಗೂ ಮಾರ್ಗದರ್ಶನ ನೀಡುತ್ತಿದ್ದವರು ಚೆನ್ನಮ್ಮ.ಸಾರ್ವಜನಿಕ ಜೀವನದಿಂದ ದೂರವೇ ಉಳಿದಿದ್ದರೂ, ಕುಟುಂಬದ ಮೌಲ್ಯಗಳು, ಸರಳತೆ ಹಾಗೂ ಸೇವಾ ಮನೋಭಾವದಿಂದ ಅವರು ಅನೇಕರಿಗೆ ಮಾದರಿಯಾಗಿದ್ದರು.








