ಸುಳ್ಯ: ಪ್ರಾಥಮಿಕ ಮತ್ತು ಪ್ರೌಢಶಾಲಾ ಮಟ್ಟದ
ದ.ಕ.ಜಿಲ್ಲಾ ಮಟ್ಟದ ಚೆಸ್ ಟೂರ್ನಿಯಲ್ಲಿ ವಿಜೇತಳಾಗಿ ಸುಳ್ಯದ ಅವನಿ.ಎಂ.ಎಸ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲಾ ಶಿಕ್ಷಣ ಇಲಾಖೆ ಮತ್ತು
ಸಾಕ್ಷರತಾ ಇಲಾಖೆ, ಕರ್ನಾಟಕ ಸರ್ಕಾರ ಉಪನಿರ್ದೇಶಕರ ಕಛೇರಿ(ಆಡಳಿತ) ಮಂಗಳೂರು,ದಕ್ಷಿಣ ಕನ್ನಡ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಮತ್ತು ಎಸ್.ಡಿ.ಎಂ ಆಂಗ್ಲಮಾಧ್ಯಮ ಶಾಲೆ ಬೆಳ್ತಂಗಡಿ ಇವರ ಸಹಯೋಗದೊಂದಿಗೆ ನಡೆದ
ದ.ಕ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ಅವನಿ.ಎಂ.ಎಸ್ ಸುಳ್ಯ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಸುಳ್ಯದ ಶಶಿಧರ ಎಂ.ಜೆ ಮತ್ತು ರೇಷ್ಮಾ ಕೆ. ಎಸ್ ದಂಪತಿಗಳ ಪುತ್ರಿ ಅವನಿ ಎಂ. ಎಸ್ ಸುಳ್ಯದ ಸೈಂಟ್ ಜೋಸೆಫ್ ಆಂಗ್ಲಮಾಧ್ಯಮ ಶಾಲೆಯ 6 ನೇ ತರಗತಿಯ ವಿದ್ಯಾರ್ಥಿನಿ.