ಚಿಕ್ಕಬಳ್ಳಾಪುರ:ಎ.ಐ.ಸಿ.ಸಿ ಯಿಂದ ಕರ್ನಾಟಕ ಪ್ರದೇಶ್ ಕಾಂಗ್ರೆಸ್ಸಿನ ರಾಜ್ಯ ಪ್ರಚಾರ ಸಮಿತಿಯ ಮುಖ್ಯ ಸಂಯೋಜಕರಾಗಿ ಮತ್ತು ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗೆ ಉಸ್ತುವಾರಿಯಾಗಿ ನೇಮಕಗೊಂಡ ಕೆ.ಪಿ ಜಾನಿ ಚಿಕ್ಕಬಳ್ಳಾಪುರಕ್ಕೆ ಭೇಟಿ ನೀಡಿ ಜಿಲ್ಲಾ ಕಾಂಗ್ರೆಸ್ ನಾಯಕರ ಜೊತೆ ಚರ್ಚೆ ನಡೆಸಿದರು.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೇಶವ ರೆಡ್ಡಿ ಅವರ
ಅಧ್ಯಕ್ಷತೆಯಲ್ಲಿ ಸಮಾಲೋಚನಾ ಸಭೆ ನಡೆಯಿತು. ಈ ಸಭೆಯಲ್ಲಿ ನಿಯೋಜಿತ ಪ್ರಚಾರ ಸಮಿತಿ ಅಧ್ಯಕ್ಷ ನಾರಾಯಣ ಸ್ವಾಮಿ ಹಾಗೂ ಬ್ಲಾಕ್ ಅಧ್ಯಕ್ಷರುಗಳು ಜಿಲ್ಲೆಯ ಎಲ್ಲಾ ಮುಂಚೂಣಿ ಘಟಕದ ನಾಯಕರು ಉಪಸ್ತಿತರಿದ್ದರು.ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾದ ಎ.ಕೆ.ಇಬ್ರಾಹಿಂ, ವಸಂತ ಪೆಲ್ತಡ್ಕ ಉಪಸ್ತಿತರಿದ್ದರು.
ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯಕುಮಾರ್ ಸೊರಕೆ ಅವರ ನೇತೃತ್ವದಲ್ಲಿ ಎ.ಐ.ಸಿ.ಸಿ.ಯ ಹಾಗೂ ಕೆ.ಪಿ.ಸಿ.ಸಿಯ ನಿರ್ದೇಶನದಂತೆ ರಾಜ್ಯದ ಪ್ರತೀ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿಯನ್ನು ರಚಿಸಿ ಮಾಡಿ ಪಕ್ಷದ ಮತ್ತು ಸರಕಾರದ ವಿವಿಧ ಜನಪರ ಯೋಜನೆಗಳ ಪ್ರಚಾರ ನಡೆಸಲಾಗುತಿದೆ.












