ಸುಳ್ಯ:ಸೇವಾ ನಿವೃತ್ತಿಗೊಳ್ಳುತ್ತಿರುವ ಕೆಎಫ್ಡಿಸಿ ವಿಭಾಗೀಯ ವ್ಯವಸ್ಥಾಪಕ ಚಿಕ್ಕಮುತ್ತಯ್ಯ ಅವರಿಗೆ ಸನ್ಮಾನ ಮತ್ತು ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಕರ್ನಾಟಕ ಅರಣ್ಯ ಅಭಿವೃದ್ದಿ ನಿಗಮದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ ವಿಭಾಗೀಯ ವ್ಯವಸ್ಥಾಪಕರಾಗಿ ಸೇವಾ ನಿವೃತ್ತಿ ಗೊಳ್ಳುತ್ತಿರುವ ಚಿಕ್ಕಮುತ್ತಯ್ಯ ಅವರಿಗೆ
ಮಲೆನಾಡು ಚಾರಿಟೇಬಲ್ ಟ್ರಸ್ಟ್ ಕಾರ್ಮಿಕ ವಿಭಾಗ ಮತ್ತು ಕೆ ಎಫ್ ಡಿ ಸಿ ಕಾರ್ಮಿಕರ ವತಿಯಿಂದ ಸನ್ಮಾನ ಮತ್ತು ಬೀಳ್ಕೊಡುಗೆ ಏರ್ಪಡಿಸಲಾಗಿತ್ತು.ರೆಡ್ ಕ್ರಾಸ್ ಸುಳ್ಯ ತಾಲೂಕು ಉಪಸಭಾಪತಿ ಹಾಗು ನ.ಪಂ.ಮಾಜಿ ಸದಸ್ಯ ಕೆ.ಎಂ.ಮುಸ್ತಫ ಸನ್ಮಾನ ನೆರವೇರಿಸಿ ಮಾತನಾಡಿದರು. ಚಿಕ್ಕಮುತ್ತಯ್ಯ ಅವರು ಸನ್ಮಾನಕ್ಕೆ ಕೃತಜ್ಞತೆ ಸಲ್ಲಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ನಿಗಮದ ವಲಯಾಧಿಕಾರಿ ಅರುಣ್, ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಖಜಾಂಚಿ ಕೆ. ಬಿ. ಇಬ್ರಾಹಿಂ, ಮಲೆನಾಡು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ರಿಯಾಜ್ ಕಟ್ಟೆಕ್ಕಾರ್ಸ್, ಅಲೆಟ್ಟಿ ಗ್ರಾಮ ಪಂಚಾಯತ್ ಸದಸ್ಯೆ ಕಮಲ, ಕೆ ಎಫ್ ಡಿ ಸಿ ಸಿಬ್ಬಂದಿಗಳಾದ ಎಂ. ಎಸ್. ಕುಮಾರ್, ಗಣೇಶ್ ನಾಗಪಟ್ಟಣ, ರಾಮಚಂದ್ರ, ವಿಜಯಕುಮಾರ್, ರಾಜೇಶ್, ರಾಜಕುಮಾರ್, ಚಂದ್ರಶೇಖರ, ವಿಜಯಕುಮಾರಿ, ಧನಲಕ್ಷ್ಮಿ,ಉಮಾ, ದೇವಿ, ರೇವತಿ ಮೊದಲಾದವರು ಉಪಸ್ಥಿತರಿದ್ದರು