ಸುಳ್ಯ:ಸುಳ್ಯ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಯಿತು.ಭಾರತದ ಪ್ರಥಮ ಪ್ರಧಾನ ಮಂತ್ರಿ ಜವಹರಲಾಲ್ ನೆಹರು ಅವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮತ್ತು ದೀಪ ಬೆಳಗಿಸಿ ಪ್ರಾರಂಭಿಸಲಾಯಿತು.ಈ ಸಂದರ್ಭದಲ್ಲಿ
ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನಗಳನ್ನು ವಿತರಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ದಯಾಮಣಿ.ಕೆ ವಹಿಸಿದ್ದರು. ವಿದ್ಯಾರ್ಥಿ ಸಂಘದ ನಾಯಕ ಜೋಯ್ಸ್ಟನ್ ಕ್ರಾಸ್ತಾ ಮತ್ತು ಕಾರ್ಯದರ್ಶಿ ಗೋಪಾಲಕೃಷ್ಣ ಮಾತನಾಡಿದರು. ಇತಿಹಾಸ ಉಪನ್ಯಾಸಕರಾದ ಪ್ರಸನ್ನ ಎನ್. ಹೆಚ್ ಮುಖ್ಯ ಭಾಷಣ ಮಾಡಿದರು. ವೇದಿಕೆಯಲ್ಲಿ ವಿವಿಧ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಹಲವಾರು ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತ ಪಡಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕ ದಾಮೋದರ ಎನ್ ಸ್ವಾಗತಿಸಿ, ಸಮಾಜಶಾಸ್ತ್ರ ಉಪನ್ಯಾಸಕ ಬಾಲಕೃಷ್ಣ ಕೆ ರವರು ವಂದಿಸಿದರು. ಗಣಿತಶಾಸ್ತ್ರ ಉಪನ್ಯಾಸಕಿ ಮೇಘ ಕಾರ್ಯಕ್ರಮ ನಿರೂಪಿಸಿದರು.





