ಸುಳ್ಯ: ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸುಳ್ಯ ಹೋಬಳಿ ಘಟಕವು ಹಮ್ಮಿಕೊಂಡಿರುವ “ಚಿಣ್ಣರೊಂದಿಗೆ ಚಿಲಿಪಿಲಿ ಗಾನ – ಕತಾ -ಯಾನ” ಸರಣಿ ಕಾರ್ಯಕ್ರಮದ ಆರನೇ ಕಾರ್ಯಕ್ರಮವು ಸುಳ್ಯ ತಾಲೂಕಿನ ಅರಂಬೂರಿನಲ್ಲಿರುವ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಇಡ್ಯಡ್ಕದಲ್ಲಿ ನಡೆಯಿತು.
ಕಾರ್ಯಕ್ರಮದ
ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಪೂರ್ವಾಧ್ಯಕ್ಷರಾದ ರಮೇಶ್ ವಹಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ಹೋಬಳಿ ಘಟಕದ ಅಧ್ಯಕ್ಷೆ ಚಂದ್ರಾವತಿ ಬಡ್ಡಡ್ಕ ಕಾರ್ಯಕ್ರಮದ ಔಚಿತ್ಯವನ್ನು ವಿವರಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಭಾವನಾ ಸಂಗೀತ ಶಾಲೆಯ ಸಂಚಾಲಕರಾದ ಕೆ.ಆರ್. ಗೋಪಾಲಕೃಷ್ಣ ಹಾಗೂ ಸಮೂಹ ಸಂಪನ್ಮೂಲ ವ್ಯಕ್ತಿ ಮಮತಾ ರವೀಶ್ ಭಾಗವಹಿಸಿ ಮಕ್ಕಳಿಗೆ ಹಾಡು ಕತೆಗಳನ್ನು ಹೇಳಿದರು
ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕದ ಜಿಲ್ಲಾ ಪ್ರತಿನಿಧಿ ರಾಮಚಂದ್ರ ಪಲ್ಲತಡ್ಕ, ಹಾಗೂ ಸುಭಾಷ್ ಕೆಎಸ್ ಉಪಸ್ಥಿತರಿದ್ದರು. ಶಾಲಾ ಮುಖ್ಯಶಿಕ್ಷಕಿ ವಿಜಯಲಕ್ಷ್ಮಿ ಸ್ವಾಗತಿಸಿದರು. ಮುಖ್ಯೋಪಾಧ್ಯಾಯಿನಿ ಕಲಾವತಿ ವಂದಿಸಿದರು. ಸಹ ಶಿಕ್ಷಕಿಯರಾದ ಮಲ್ಲಿಕ, ಮಾನಸ ಎ ಮತ್ತು ಕವಿತಾ ಕಾಂಚನ್ ಸಹಕರಿಸಿದರು. ಮಕ್ಕಳ ಪೋಷಕರೂ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.














