ಸುಳ್ಯ:ಕ್ರಿಯೇಟಿವ್ ಸ್ಕೂಲ್ ಆಫ್ ಆರ್ಟ್ಸ್ ಸುಳ್ಯ ಇದರ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ನಡೆದ ಸುಳ್ಯ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ, ಉದಯವಾಣಿ ಚಿತ್ರಕಲಾ ಸ್ಪರ್ಧೆ ಹಾಗೂ ಕನ್ನಡಪ್ರಭಾ ಚಿತ್ರಕಲಾ ಸ್ಪರ್ಧೆಯಲ್ಲಿ ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು
ಬಹುಮಾನ ಪಡೆದಿದ್ದಾರೆ. ತ್ರಯಾಕ್ಷಾ ಮೂರನೇ ತರಗತಿ,ಪ್ರತೀಕ್ಷಾ 9ನೇ ತರಗತಿ,ಅನುಜ್ಞ ಎಂಟನೇ ತರಗತಿ ಬಹುಮಾನ ಪಡೆದಿದ್ದಾರೆ.ವಿಜೇತ ವಿದ್ಯಾರ್ಥಿಗಳನ್ನು ನಮ್ಮ ಶಾಲಾ ಸಂಚಾಲಕರಾದ ಡಾ. ರೇಣುಕಾ ಪ್ರಸಾದ್ ಕೆ ವಿ ಅವರು ಅಭಿನಂದಿಸಿ , ಶುಭ ಹಾರೈಸಿದರು.ಪ್ರಾಂಶುಪಾಲರಾದ ಅರುಣ್ ಕುಮಾರ್ ರವರು ವಿದ್ಯಾರ್ಥಿಗಳನ್ನು ಗೌರವಿಸಿದರು. ಈ ಸಂದರ್ಭದಲ್ಲಿ ಉಪ ಪ್ರಾಂಶುಪಾಲೆ ಶಿಲ್ಪ ಬಿದ್ದಪ್ಪ ಮತ್ತು ಶಿಕ್ಷಕ, ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.












