ಸುಳ್ಯ:ಸಂಸ್ಕಾರಯುತ ಶಿಕ್ಷಣವು ಜೀವನದಲ್ಲಿ ಉತ್ತಮ ಮೌಲ್ಯಗಳನ್ನು ಬಿತ್ತಿ ಉತ್ತಮ ವ್ಯಕ್ತಿತ್ವವನ್ನು ರೂಪಿಸಲು ಮಕ್ಕಳಿಗೆ ಪ್ರೇರೇಪಣೆ ನೀಡುತ್ತದೆ ಎಂದು ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್ ಹೇಳಿದ್ದಾರೆ. ಕುಕ್ಕುಜಡ್ಕದ ಚೊಕ್ಕಾಡಿ ವಿದ್ಯಾಸಂಸ್ಥೆಗಳ ಸ್ಥಾಪನಾ ದಿನಾಚರಣೆಯಲ್ಲಿ
ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.ಎಷ್ಟೇ ಸಂಕಷ್ಟಗಳು, ಸವಾಲುಗಳು ಇದ್ದರೂ ಅದನ್ನು ಮೆಟ್ಟಿ ನಿಂತು ಶಿಕ್ಷಣ ಪಡೆದರೆ ಮಾತ್ರ ಜೀವನದಲ್ಲಿ ಸಾಧನೆ ಮಾಡಬಹುದು ಎಂದರು. ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷ ನಿರಂಜನ್ ಕೊಡ್ತುಗುಳಿ ಅಧ್ಯಕ್ಷತೆ ವಹಿಸಿದ್ದರು.
ಲಕ್ಷ್ಮೀಶ ಚೊಕ್ಕಾಡಿಯವರ ಕವನ ಸಂಕಲನ “ನುಡಿಗಿಡಿದ ಮೌನ”ವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಎಸ್. ಹರಗಿ ಬಿಡುಗಡೆ ಮಾಡಿದರು.
ಪುತ್ತೂರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಸ್ಥಾತಕೋತ್ತರ ಅಧ್ಯಯನ ಕೇಂದ್ರದ ಡೀನ್ ವಿಜಯ ಸರಸ್ವತಿ ಬಿ, ಮಾತನಾಡಿದರು.
ಎಸ್ಎಸ್ಎಲ್ಸಿಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಹಾಗು ಹಿರಿಯರಾದ ಲಕ್ಷ್ಮೀಶ ಚೊಕ್ಕಾಡಿ ಅವರನ್ನು ಸನ್ಮಾನಿಸಲಾಯಿತು. ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿಯ ಸಂಚಾಲಕ ಸುಪ್ರೀತ್, ಖಜಾಂಜಿ ಜಗನ್ನಾಥ ಹಿರಿಯಡ್ಕ, ನಿರ್ದೇಶಕರಾದ ಆನಂದ ಚಿಲ್ಪಾರು, ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಸಂಕೀರ್ಣ ಚೊಕ್ಕಾಡಿ ಹಾಗೂ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಭವ್ಯ ಪಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ತೇಜಸ್ವಿ ಕಡಪಳ ಸ್ವಾಗತಿಸಿ, ತಿಮ್ಮಪ್ಪ ಗೌಡ ಕೊಂಡೆಬಾಯಿ ವಂದಿಸಿದರು. ಶಿಕ್ಷಕಿ ಸಂಧ್ಯಾ ಕುಮಾರಿ ಕಾರ್ಯಕ್ರಮ ನಿರೂಪಿಸಿದರು.







