ಚೊಕ್ಕಾಡಿ: ಚೊಕ್ಕಾಡಿ ವಿದ್ಯಾ ಸಂಸ್ಥೆಯ 53ನೆಯ ವರ್ಷದ ಸ್ಥಾಪನಾ ದಿನಾಚರಣೆ ಮತ್ತು ಶಾಲಾ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಸಭಾಧ್ಯಕ್ಷತೆಯನ್ನು ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷ ಎಸ್.ಅಂಗಾರ ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ
ಎಒಎಲ್ಇಯ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ ಸಿ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.
ಶಾಲಾ ಆಡಳಿತ ಮಂಡಳಿಯ ಸಂಚಾಲಕ ರಾಧಾಕೃಷ್ಣ ಬೊಳ್ಳೂರು, ಉಪಾಧ್ಯಕ್ಷ ಅಣ್ಣಾಜಿ ಗೌಡ ಪೈಲೂರು, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ವಿಶ್ವನಾಥ ಎಂ., ಅಮರ ಮುಡ್ನೂರು ಗ್ರಾಮ ಪಂಚಾಯತಿಯ ಸದಸ್ಯ ಕೃಷ್ಣಪ್ರಸಾದ್ ಮಾಡಬಾಕಿಲು, ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಭವ್ಯ ಪಿ ಇದ್ದರು. ಉಪಸ್ಥಿತರಿದ್ದರು.
ಪ್ರೌಢಶಾಲಾ ಮುಖ್ಯ ಶಿಕ್ಷಕ ಸಂಕೀರ್ಣ ಚೊಕ್ಕಾಡಿ ಸ್ವಾಗತಿಸಿ, ಕಾರ್ಯದರ್ಶಿ ತೇಜಸ್ವಿ ಕಡಪಳ ವಂದಿಸಿದರು. ಶಿಕ್ಷಕ ಹರಿಪ್ರಸಾದ ಕೆ ಕಾರ್ಯಕ್ರಮ ನಿರೂಪಿಸಿದರು.














