ಸುಳ್ಯ: ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಶಾಲೆಗೆ 50 ವರ್ಷ ತುಂಬಿನ ಸಂಭ್ರಮವನ್ನು ಆಚರಿಸುವ ಸಲುವಾಗಿ ಸುವರ್ಣ ಮಹೋತ್ಸವದ ಪೂರ್ವಭಾವಿ ಸಭೆಯನ್ನು ನಡೆಯಿತು. ಆಡಳಿತ ಮಂಡಳಿ ಅಧ್ಯಕ್ಷರಾದ ಮಾಜಿ ಸಚಿವ ಎಸ್. ಅಂಗಾರ ಅವರು ಅಧ್ಯಕ್ಷತೆ ವಹಿಸಿ ಊರ ಹಿರಿಯರು ಕಟ್ಟಿದ ಶಾಲೆಯನ್ನು ಉಳಿಸಿ ಬೆಳೆಸುವ ಹೊಣೆಗಾರಿಕೆ ನಮಗಿದೆ. 50 ವರ್ಷ ತುಂಬಿದ ಸಂಭ್ರಮವನ್ನು ಎಲ್ಲರೂ ಸೇರಿ ಆಚರಿಸಬೇಕಿದೆ. ಅದಕ್ಕಾಗಿ
ಎಲ್ಲರೂ ಜೊತೆಯಾಗಬೇಕು ಎಂದು ಹೇಳಿದರು. ಶಾಲಾ
ಸಂಚಾಲಕರಾದ ರಾಧಾಕೃಷ್ಣ ಬೊಳ್ಳೂರು, ಆಡಳಿತ ಮಂಡಳಿ ಉಪಾಧ್ಯಕ್ಷ ಅಣ್ಣಾಜಿ ಗೌಡ ಪೈಲೂರು, ಕಾರ್ಯದರ್ಶಿ ತೇಜಸ್ವಿ ಕಡಪಳ, ಖಜಾಂಜಿ ಹರ್ಷವರ್ಧನ ಬೊಳ್ಳೂರು, ನಿರ್ದೇಶಕರಾದ ಆನಂದ ಚಿಲ್ಪಾರು, ಪ್ರೌಢಶಾಲೆಯ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ವಿಶ್ವನಾಥ ಮೂಕಮಲೆ, ಆಂಗ್ಲ ಮಾಧ್ಯಮ ಶಾಲೆ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಪ್ರಕಾಶ ಮಾಯಿಪಡ್ಕ, ಆಂಗ್ಲ ಮಾಧ್ಯಮ ಶಾಲೆ ಮುಖ್ಯೋಪಾಧ್ಯಾಯಿನಿ ಚೈತ್ರಾ ಯು. ಹಾಗೂ ಹಿರಿಯ ಶಿಕ್ಷಕಿ ಸಂಧ್ಯಾಕುಮಾರಿ ಅವರು
ವೇದಿಕೆಯಲ್ಲಿ ಉಪಸ್ಥಿತರಿದ್ದರು. ಹಿರಿಯ ಅಧ್ಯಾಪಕರಾದ ಎಂ.ಟಿ. ಶಾಂತಿಮೂಲೆ, ಆಡಳಿತ ಮಂಡಳಿ ನಿರ್ದೇಶಕರುಗಳಾದ ಅರುಣ ನಾಯರ್ ಕಲ್ಲು, ವೆಂಕಟ್ರಮಣ ಇಟ್ಟಿಗುಂಡಿ, ಭಾಸ್ಕರ ಮೇರ್ಕಜೆ, ಜಗನ್ನಾಥ ಹಿರಿಯಡ್ಕ, ಸನತ್ ದೇರಾಜೆ, ಸತ್ಯಪ್ರಸಾದ್ ಪುಳಿಮಾರಡ್ಕ, ಮುಖ್ಯೋಪಾಧ್ಯಾಯರಾದ ಸಂಕೀರ್ಣ ಚೊಕ್ಕಾಡಿ, ಶಿಕ್ಷಕ ವೃಂದ ಮತ್ತು ಸಿಬ್ಬಂದಿ ವರ್ಗದವರು, ವಿದ್ಯಾಭಿಮಾನಿಗಳು ಹಾಗೂ ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸುವರ್ಣ ಮಹೋತ್ಸವದ ವಿವಿಧ ಸಮಿತಿಗಳನ್ನು ರಚಿಸಲಾಯಿತು.