ಸುಳ್ಯ: ರಾಜ್ಯದ ವಿವಿಧ ಮಾಧ್ಯಮಗಳಲ್ಲಿ ಕಾಂಗ್ರೆಸ್ ಚೊಂಬು ಚಿತ್ರ ಸಮೇತ ನೀಡಿದ ಚೊಂಬು ಜಾಹಿರಾತಿಗೆ ಬಿಜೆಪಿ ಖಂಡನೆ ವ್ಯಕ್ತಪಡಿಸಿದೆ. ಸುಳ್ಯ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ಕಾಂಗ್ರೆಸ್ ಚುನಾವಣಾ ಪ್ರಚಾರಕ್ಕಾಗಿ ಈ ರೀತಿಯ ಜಾಹಿರಾತು ನೀಡಿರುವುದು ಖಂಡನೀಯ. ರಾಜ್ಯದ ಜನತೆ ಚುನಾವಣೆಯಲ್ಲಿ
ಇದಕ್ಕೆ ಸೂಕ್ತ ಉತ್ತರ ನೀಡಲಿದೆ ಎಂದರು.ಕರ್ನಾಟಕಕ್ಕೆ ಮೋದಿ ಸರಕಾರ ಕೊಟ್ಟ ಕೊಡುಗೆ ಚೊಂಬು ಎಂದು ಚೊಂಬು ಚಿತ್ರ ಸಮೇತ ಕಾಂಗ್ರೆಸ್ ಜಾಹಿರಾತು ಪ್ರಕಟಿಸಿತ್ತು. ಇದನ್ನು ಬಿಜೆಪಿ ಖಂಡಿಸುವುದಾಗಿ ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ವಿನಯಕುಮಾರ್ ಕಂದಡ್ಕ ಪ್ರದೀಪ್ ರೈ ಮನವಳಿಕೆ, ಕೋಶಾಧಿಕಾರಿ ಸುಬೋದ್ ಶೆಟ್ಟಿ ಮೇನಾಲ, ಸುಳ್ಯ ನಗರ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಕುಸುಮಾಧರ ಎ.ಟಿ, ಶಿವಪ್ರಸಾದ್ ನಡುತೋಟ, ಸುದರ್ಶನ ಪಾತಿಕಲ್ಲು, ಹೇಮಂತ ಮಠ, ಪ್ರದೀಪ್ ಕೊಲ್ಲರಮೂಲೆ ಉಪಸ್ಥಿತರಿದ್ದರು.