ನವದೆಹಲಿ: ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ ಅವರನ್ನು ದೆಹಲಿಯ ಸಚಿವಾಲಯದಲ್ಲಿ ದ.ಕ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿಯಾಗಿ ಮಾತುಕತೆ ನಡೆಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಇರುವ ಸಾಧ್ಯತೆ ಮತ್ತು ಅವಕಾಶಗಳ ಕುರಿತು ಸಂಸದರು ಸಚಿವರ ಜೊತೆ ಮಾತುಕತೆ ನಡೆಸಿದರು.