ಮಂಗಳೂರು: ದಕ್ಷಿಣ ಕನ್ನಡದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಏಪ್ರಿಲ್ 22ರಂದು ಬೆಳಗ್ಗೆ 9 ಗಂಟೆಯಿಂದ 11 ಗಂಟೆಯವರೆಗೆ ಸಾರ್ವಜನಿಕರ ಭೇಟಿಗೆ ತಮ್ಮ ಕಚೇರಿಯಲ್ಲಿ ಲಭ್ಯವಿರುತ್ತಾರೆ.ಜನರು ತಮ್ಮ ಅಹವಾಲುಗಳೊಂದಿಗೆ ಮಂಗಳವಾರ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಗೆ ಬಂದು ಕ್ಯಾ. ಚೌಟ ಅವರನ್ನು ಖುದ್ದು ಭೇಟಿ ಮಾಡಬಹುದು. ಆ ಮೂಲಕ ಸಾರ್ವಜನಿಕರು ತಮ್ಮ ಕುಂದು-ಕೊರತೆಗಳನ್ನು ಗಮನಕ್ಕೆ ತರಬಹುದು ಎಂದು ಸಂಸದ ಕ್ಯಾ. ಚೌಟ ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post
ಕ್ರೈಸ್ತ ಧರ್ಮದ ಪರಮೋಚ್ಛ ನಾಯಕ ಪೋಪ್ ಫ್ರಾನ್ಸಿಸ್ ನಿಧನ
next post