ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಚುನಾವಣಾ ಪ್ರಚಾರದ ಕೊನೆಯಲ್ಲಿ ಮಂಗಳೂರು ನಗರದ ಶಕ್ತಿನಗರದಲ್ಲಿ ಕಾಲ್ನಡಿಗೆಯಲ್ಲಿ ರೋಡ್ ಶೋ ನಡೆಸಿದ್ದಾರೆ. ಶಕ್ತಿನಗರದಿಂದ ನಾಲ್ಯಪದವು ಶತಮಾನೋತ್ಸವ ಶಾಲೆಯ ವರೆಗೂ ನೂರಾರು ಕಾರ್ಯಕರ್ತರ ಜೊತೆಗೆ ಕಾಲ್ನಡಿಗೆಯಲ್ಲಿ ಬಂದು ಮತಯಾಚನೆ ಮಾಡಿದರು.