ಸುಳ್ಯ: ಸುಳ್ಯದ ಕೆವಿಜಿ ಕ್ಯಾಂಪಸ್ಗೆ ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟರವರು ಎ. 17ರಂದು ಭೇಟಿ ನೀಡಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ. ಹಾಗೂ ಉಪಾಧ್ಯಕ್ಷೆ ಶೋಭಾ ಚಿದಾನಂದ ಅವರನ್ನು
ಭೇಟಿ ಮಾಡಿ ಬ್ರಿಜೇಶ್ ಚೌಟ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ
ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರ.ಕಾರ್ಯದರ್ಶಿಗಳಾದ ವಿನಯಕುಮಾರ್ ಕಂದಡ್ಕ, ಪ್ರದೀಪ್ ರೈ ಮನವಳಿಕೆ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರುಗಳಾದ ವಿನಯಕುಮಾರ್ ಮುಳುಗಾಡು, ರವೀಂದ್ರ ಶೆಟ್ಟಿ ಉಳಿದೊಟ್ಟು, ಪ್ರಭಾರಿ ಅಪ್ಪಯ್ಯ ಮಣಿಯಾಣಿ ಪುತ್ತೂರು, ಬಿಜೆಪಿ ಮುಖಂಡರಾದ ಹರೀಶ್ ಕಂಜಿಪಿಲಿ, ಎಸ್.ಎನ್. ಮನ್ಮಥ ಸೇರಿದಂತೆ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.