ಮಂಗಳೂರು:ಲೋಕಸಭಾ ಚುನಾವಣೆಯ ಮತ ಎಣಿಕೆ ಅಂತಿಮ ಹಂತಕ್ಕೆ ಬಂದಿದ್ದು ಭಾರೀ ಅಂತರದಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಹಿನ್ನಲೆಯಲ್ಲಿ

ಬಿಜೆಪಿ ಮುಖಂಡರು, ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮತ್ತಿತರರು ಭಾಗವಹಿಸಿದ್ದಾರೆ. ಆರಂಭದಿಂದಲೂ ಬಹುಮತ ಕಾಯ್ದುಕೊಂಡಿರುವ ಬ್ರಿಜೇಶ್ ಚೌಟ 1,38,000 ಕ್ಕೂ ಅಧಿಕ ಮತಗಳ ಲೀಡ್ನಲ್ಲಿ ಗೆಲುವು ಸಾಧಿಸಿದ್ದಾರೆ. ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.










