ಮಂಗಳೂರು: ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ 2023ರ ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಯನ್ನು ಸುಗಮವಾಗಿ, ಮುಕ್ತವಾಗಿ ಹಾಗೂ ಶಾಂತಿಯುತವಾಗಿ, ಯಾವುದೇ ರೀತಿಯ ಚುನಾವಣಾ ಅಕ್ರಮಗಳು ನಡೆಯದಂತೆ ನಿಗಾವಹಿಸುವ ಚುನಾವಣಾ ಅಕ್ರಮ ತಡೆಗಟ್ಟುವ ಅಧಿಕಾರಿಯನ್ನಾಗಿ, ಆದಾಯ ತೆರಿಗೆ ಇಲಾಖೆಯ ಉಪನಿರ್ದೇಶಕರಾಗಿರುವ ಮಂಜುನಾಥ್ ಎಚ್.ಎಸ್. (ಐ.ಆರ್.ಎಸ್) ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.