ಬೆಂಗಳೂರು:ಸಿದ್ದರಾಮಯ್ಯ ರಾಜೀನಾಮೆ ಅಂಗೀಕರವಾದ ಬೆನ್ನಲ್ಲೇ ನೂತನ ನಾಯಕನ ಆಯ್ಕೆಗಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಇಂದು ಸಂಜೆ 4 ಗಂಟೆಗೆ ನಡೆಯಲಿದೆ. ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ.ಶಿವಕುಮಾರ್ ಮುಂದಿನ ಮುಖ್ಯಮಂತ್ರಿಯಾಗುವ ಸಾಧ್ಯತೆ ನಿಚ್ಚಳವಾಗಿದೆ.ಶಾಸಕಾಂಗ ಪಕ್ಷದ
ನಾಯಕ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಯಲಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರ ಮೇಲ್ನೋಟದಲ್ಲಿ ಸಭೆ ನಡೆಯಲಿದೆ.ಶುಕ್ರವಾರದಂದು ಸಿದ್ದರಾಮಯ್ಯ ಅವರ ರಾಜೀನಾಮೆಯನ್ನು ಅಂಗೀಕರಿಸಿದ ರಾಜ್ಯಪಾಲ ಥಾವರಚಂದ್ ಗೆಹಲೋತ್, ರಾಜ್ಯ ಸಚಿವ ಸಂಪುಟವನ್ನು ವಿಸರ್ಜಿಸಿದ್ದಾರೆ. ಹೊಸ ಸಿಎಲ್ಪಿ ನಾಯಕರಾಗಿ ಡಿಕೆಶಿ ಆಯ್ಕೆಯಾಗಲಿದ್ದು
ನೂತನ ಮುಖ್ಯಮಂತ್ರಿಯ ಪ್ರಮಾಣವಚನ ಸ್ವೀಕಾರ ಸಮಾರಂಭ ಭಾನುವಾರ ಅಥವಾ ಸೋಮವಾರ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.















