ನವದೆಹಲಿ:ರಾಜ್ಯದ ನೂತನ ಮುಖ್ಯಮಂತ್ರಿ ಆಯ್ಕೆ ಸಂಬಂಧಪಟ್ಟು ಕಾಂಗ್ರೆಸ್ನಲ್ಲಿ ಉಂಟಾಗಿರುವ ಬಿಕ್ಕಟ್ಟು
ಮುಂದುವರಿದಿದೆ. ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ಧರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಮಧ್ಯೆ ತೀವ್ರ ಪೈಪೋಟಿ ನಡೆಯುತಿದೆ.
ದೆಹಲಿಯಲ್ಲಿ ರಾಜ್ಯದ ಸಿಎಂ ಆಯ್ಕೆ ಸಂಬಂಧಪಟ್ಟು ಚರ್ಚೆಗಳು ಮುಂದುವರಿದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಇತರ
ಮುಖಂಡರು ಡಿ.ಕೆ ಶಿವಕುಮಾರ್ ಅವರ ಜೊತೆ ಮಾತುಕತೆ ನಡೆಸಿದ್ದಾರೆ.
ಆದರೆ ಮುಖ್ಯಮಂತ್ರಿ ಸ್ಥಾನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಿಗಿ ಪಟ್ಟು ಹಿಡಿದಿದ್ದಾರೆ. ಯಾವುದೇ ಷರತ್ತಿಗೂ ಒಪ್ಪಿಲ್ಲಾ ಎಂದು ಹೇಳಲಾಗುತಿದೆ. ಇದೇ ಸಂದರ್ಭದಲ್ಲಿ ಸಿದ್ಧರಾಮಯ್ಯ ಸಿಎಂ ಆಯ್ಕೆಯಾಗಿದ್ದಾರೆ ಎಂಬ ರೀತಿಯ ಸುದ್ದಿಗಳೂ ಹರಿದಾಡಿತ್ತು. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿ ಮುಖ್ಯಮಂತ್ರಿ ಆಯ್ಕೆ ಫೈನಲ್ ಆಗಿಲ್ಲ. ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವಂತ ಸುದ್ದಿಗಳು ಸತ್ಯಕ್ಕೆ ದೂರವಾದವುಗಳು ಆಗಿದ್ದಾವೆ. ಮುಂದಿನ 48 ರಿಂದ 72 ಗಂಟೆಯಲ್ಲಿ ನೂತನ ಸಚಿವ ಸಂಪುಟ ರಚನೆಯಾಗಲಿದೆ ಎಂಬುದಾಗಿ ಹೇಳಿದ್ದಾರೆ.