ಬೆಂಗಳೂರು:ಸುಳ್ಯ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ಶಾಸಕಿ ಭಾಗೀರಥಿ ಮುರುಳ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಅನುಕೂಲವಾಗುವಂತೆ ಹೆಚ್ಚಿನ ಅನುದಾನವನ್ನು ನೀಡುವಂತೆ ಅವರು ಮನವಿ ಸಲ್ಲಿಸಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ

ಅಧ್ಯಕ್ಷತೆಯಲ್ಲಿ ನಡೆದ
ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಭಾಗವಹಿಸಿದ ಶಾಸಕರು ಕ್ಷೇತ್ರದ ಬುಡಕಟ್ಟು ಜನಾಂಗದ ಜನರ ಕುಂದುಕೊರತೆ, ಸಮಸ್ಯೆಗಳ ಬಗ್ಗೆ ತಿಳಿಸಿ ಮುಖ್ಯಮಂತ್ರಿಗಳ ಗಮನ ಸೆಳೆದರು.