ಬೆಂಗಳೂರು: ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ನಡೆದಿರುವುದನ್ನು ಖಂಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು ಎಂದು ಹೇಳಿದ್ದಾರೆ.ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳು ಪ್ರವೀಣ್ ಆತ್ಮಕ್ಕೆ ಶಾಂತಿ ಸಿಗಲಿ, ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ ಎಂದು ಸಂತಾಪ ಸೂಚಿಸಿದರು. ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ.